ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಟ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಿ: ರಮಾನಾಥ್ ರೈ

Last Updated 27 ಮಾರ್ಚ್ 2022, 19:49 IST
ಅಕ್ಷರ ಗಾತ್ರ

ಬೆಂಗಳೂರು: ‘ಬಂಟ ಸಮುದಾಯದಲ್ಲೂ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಹೀಗಾಗಿ ಈ ಸಮುದಾಯದವರನ್ನೂ ಕೇಂದ್ರ ಸರ್ಕಾರ ಹಿಂದುಳಿದ ವರ್ಗಕ್ಕೆ ಸೇರಿಸಬೇಕು’ ಎಂದು ಕಾಂಗ್ರೆಸ್‌ ಮುಖಂಡ ರಮಾನಾಥ್ ರೈ ಒತ್ತಾಯಿಸಿದರು.

ಬಂಟರ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸ್ಮಾರಕ ಕ್ರೀಡಾ ಮತ್ತು ಸಾಂಸ್ಕೃತಿಕ’ ದಿನಾಚರಣೆ ಕಾರ್ಯಕ್ರಮದಲ್ಲಿ ‘ಜೀವರಾಜ್‌ ಆಳ್ವ ಸದ್ಭಾವನಾ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡಿದರು.

‘ಬಂಟ ಸಮುದಾಯವು ಎಲ್ಲಾ ಕ್ಷೇತ್ರ ಗಳಲ್ಲೂ ಗುರುತಿಸಿಕೊಂಡಿದೆ. ಎಲ್ಲಾ ಸಮಾಜದ ವಿಶ್ವಾಸವನ್ನೂ ಗಳಿಸಿದೆ. ಕೇಂದ್ರವು ಈ ಸಮುದಾಯವನ್ನು ಸಾಮಾನ್ಯ ವರ್ಗಕ್ಕೆ ಸೇರ್ಪಡೆ ಮಾಡಿದೆ. ಇದರಿಂದ ಸಮುದಾಯದವರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ.
ರಾಜ್ಯದಲ್ಲಿ ಬಂಟ ಸಮಾಜ
3–ಬಿ ಪ್ರವರ್ಗದಲ್ಲಿದೆ. ಬಂಟ ಸಮಾಜದಲ್ಲಿರುವ ಆರ್ಥಿಕವಾಗಿ ಹಿಂದುಳಿದವರಿಗೆ ನ್ಯಾಯ ಒದಗಿಸಬೇಕು’ ಎಂದರು.

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ, ‘ಬಂಟ ಸಮುದಾಯವನ್ನುಹಿಂದುಳಿದ ವರ್ಗಕ್ಕೆ ಸೇರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನ
ಮಾಡುತ್ತೇನೆ. ಕೇಂದ್ರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಆಯುಕ್ತರು ಮತ್ತು ಸಚಿವರನ್ನುಭೇಟಿ ಮಾಡಿ ಚರ್ಚಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT