ಮಂಗಳವಾರ, ಸೆಪ್ಟೆಂಬರ್ 28, 2021
20 °C

ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಪ್ರಸಕ್ತ ವರ್ಷ ₹ 2 ಕೋಟಿ: ಹೊರಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು 2021–22ನೇ ಸಾಲಿನಲ್ಲಿ ₹ 1 ಕೋಟಿ ಬದಲು ₹ 2 ಕೋಟಿ ನೀಡಲು ಸೂಚನೆ ನೀಡಲಾಗಿದೆ. ಹೀಗಾಗಿ, ಈ ವರ್ಷ ₹ 600 ಕೋಟಿ ಬಿಡುಗಡೆ ಮಾಡಲಾಗಿದೆ. ಅಲ್ಲದೆ, 2021–19, 20, 21ನೇ ಸಾಲಿನ ಬಾಕಿ ಅನುದಾನ ಬಿಡುಗಡೆಗೂ ಸೂಚಿಸಲಾಗಿದೆ’ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಶಾಸಕರ ನಿಧಿಗೆ ಸಂಬಂಧಿಸಿ ದಂತೆ ಪರಿಷತ್‌ ಸದಸ್ಯರ ಜೊತೆ ಶನಿವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಪ್ರತಿ ವರ್ಷ ಜೂನ್ ಅಂತ್ಯದ ಒಳಗಾಗಿ ಕ್ರಿಯಾ ಯೋಜನೆ ಅಂತಿಮಗೊಳಿಸಿ ಕಾಮಗಾರಿ ಪ್ರಗತಿಗೆ ಅನುದಾನ ಬಿಡುಗಡೆಗೆ ಒಪ್ಪಿಗೆ ಪಡೆಯಬೇಕು. ಕ್ಷೇತ್ರಾವಾರು ಬದಲು ಜಿಲ್ಲಾವಾರು ಅನುದಾನ ಬಿಡುಗಡೆಗೆ ಯೋಜನಾ ಇಲಾಖೆ ಆದೇಶ ಹೊರಡಿಸಿದೆ’ ಎಂದರು.

‘ಜಿಲ್ಲಾಧಿಕಾರಿಗಳು ಶಾಸಕರ ನಿಧಿಯಡಿ ಲಭ್ಯವಿರುವ ಅನುದಾನ ವನ್ನು ಪ್ರತಿ ಕ್ಷೇತ್ರಕ್ಕೆ ₹ 2 ಕೋಟಿ ಪಾವತಿಗೆ ಸೂಚಿಸಲಾಗಿದೆ. ಅನು ದಾನ ಬಿಡುಗಡೆ ವಿಷಯದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿಸಿದರೆ ಶಾಸಕರು ನನ್ನ ಗಮನಕ್ಕೆ ತರಬಹುದು. ದೂರು ಬಂದರೆ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳ ವಿರುದ್ಧ ಸಂಬಂಧಿಸಿದವರ ಗಮನಕ್ಕೆ ತರಲಾಗುವುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು