ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಶಾಲೆಯಲ್ಲಿ ಸ್ಥಳೀಯ ಪ್ರಾತಿನಿಧ್ಯ: ಆದೇಶ ಕಾಯ್ದಿರಿಸಿದ ಹೈಕೋರ್ಟ್

Last Updated 2 ಸೆಪ್ಟೆಂಬರ್ 2020, 20:57 IST
ಅಕ್ಷರ ಗಾತ್ರ

ಬೆಂಗಳೂರು:ರಾಷ್ಟ್ರೀಯ ಕಾನೂನು ಶಾಲೆಯಲ್ಲಿಸ್ಥಳೀಯವಿದ್ಯಾರ್ಥಿಗಳಿಗೆ ಶೇ 25ರಷ್ಟುಪ್ರಾತಿನಿಧ್ಯ ವಿಷಯದ ಕುರಿತು ಹೈಕೋರ್ಟ್‌ ತನ್ನ ಆದೇಶ ಕಾಯ್ದಿರಿಸಿದೆ.

ಶೇ 25ರಷ್ಟು ಮೀಸಲಾತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೂರು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ‘ಈ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಇತರ ರಾಜ್ಯದ ವಿದ್ಯಾರ್ಥಿಗಳಲ್ಲಿ ಬಹುತೇಕರು ಕರ್ನಾಟಕದಲ್ಲಿ ವೃತ್ತಿ ಮುಂದುವರಿಸುವುದಿಲ್ಲ. ಕಾನೂನು ವಿಶ್ವವಿದ್ಯಾಲಯ ಕಾಯ್ದೆಯನ್ನು ರಾಜ್ಯದ ಶಾಸಕಾಂಗ ಅಂಗೀಕರಿಸಿದೆ. ಭೂಮಿ ಒದಗಿಸುವ ಜತೆಗೆ ಆರ್ಥಿಕವಾಗಿಯೂ ಸಂಸ್ಥೆಗೆ ಸಹಾಯ ಮಾಡಲಾಗುತ್ತಿದೆ’ ಎಂದು ಸರ್ಕಾರ ಮಾಹಿತಿ ನೀಡಿತು.

‘ರಾಷ್ಟ್ರೀಯ ಕಾನೂನು ಶಾಲೆ ಕಾಯ್ದೆ–2020 ಪ್ರಕಾರ ರಾಜ್ಯದಲ್ಲಿ 10 ವರ್ಷ ವ್ಯಾಸಂಗ ಮಾಡಿರುವ ಶೇ 25ರಷ್ಟು ವಿದ್ಯಾರ್ಥಿಗಳಿಗೆ ಮೀಸಲಾತಿ ದೊರೆಯಲಿದೆ. ಇದು ಸಂವಿಧಾನಕ್ಕೆ ವಿರುದ್ಧವಾದ ಕಾಯ್ದೆ’ ಎಂಬುದು ಅರ್ಜಿದಾರರ ವಾದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT