ಗುರುವಾರ , ಜೂನ್ 24, 2021
24 °C

ಮೇ 10 ರಿಂದಲೇ ಲಾಕ್‌ಡೌನ್‌: ಸಂಜೆ ನಿರ್ಧಾರ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯಾದ್ಯಂತ ಮೇ 10 ರಿಂದಲೇ ಲಾಕ್‌ಡೌನ್‌ ಮಾಡಲು ಬಹುತೇಕ ತೀರ್ಮಾನ ಆಗಿದ್ದು, ಸಂಜೆ ನಡೆಯಲಿರುವ ಸಚಿವರು ಮತ್ತು ಅಧಿಕಾರಿಗಳ ಜತೆಗಿನ ಮತ್ತೊಂದು ಸುತ್ತಿನ ಸಭೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧಿಕೃತವಾಗಿ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.

ಮೇ 10 ರಿಂದ ಒಟ್ಟು 14 ದಿನಗಳ ಲಾಕ್‌ಡೌನ್‌ ಆಗಲಿದೆ. ಅದರ ಸ್ವರೂಪ ಹೇಗಿರಲಿದೆ ಎಂಬುದನ್ನು ಪ್ರತ್ಯೇಕವಾಗಿ ಮಾರ್ಗಸೂಚಿಯನ್ನು ಹೊರಡಿಸಲಾಗುವುದು. ಪ್ರತಿ ನಿತ್ಯ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದು ಮತ್ತು ಸಾವಿನ ಸಂಖ್ಯೆಯೂ ಹೆಚ್ಚುತ್ತಿರುವುದರಿಂದ ಲಾಕ್‌ಡೌನ್‌ಗೆ ತಜ್ಞರೂ ಸಲಹೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು