ಗುರುವಾರ , ಏಪ್ರಿಲ್ 15, 2021
31 °C

ಲೋಕಾಯುಕ್ತ ವರದಿ ಮೂಲೆಗುಂಪು: ಸರ್ಕಾರಕ್ಕೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಲೋಕಾಯುಕ್ತ ವರದಿ ಆಧರಿಸಿ ಕ್ರಮ ಕೈಗೊಳ್ಳಲು ವಿಫಲವಾಗಿರುವ ಕಾರಣ ಸರ್ಕಾರದ ಮುಖ್ಯ ಕಾರ್ಯದರ್ಶಿ, ವಿವಿಧ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಲು ಹೈಕೋರ್ಟ್ ಆದೇಶಿಸಿದೆ.

ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆಯನ್ನು ಜೂನ್ 4ಕ್ಕೆ ಮುಂದೂಡಿತು.

‘ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 12(1)ರ ಅಡಿಯಲ್ಲಿ ದಾಖಲಾದ 342 ಪ್ರಕರಣಗಳಿಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ವರದಿ ಸಲ್ಲಿಸಿದೆ. 932 ಪ್ರಕರಣಗಳು ಸರ್ಕಾರದ ವಿವಿಧ ಪ್ರಾಧಿಕಾರಗಳಿಂದ ಅನುಮತಿ ಅಥವಾ ಒಪ್ಪಿಗೆಗೆ ಕಾದಿವೆ. ವರದಿ ಆಧರಿಸಿ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಬೇಕು’ ಎಂದು ಅರ್ಜಿಯಲ್ಲಿ ಸಾಯಿದತ್ತ ಕೋರಿದ್ದರು.

‘ತಪ್ಪಿತಸ್ಥ ಅಧಿಕಾರಿ ಅಥವಾ ಸಿಬ್ಬಂದಿ ವಿರುದ್ಧ ಕ್ರಮ ಅಗತ್ಯವಿದೆ ಎಂದು ಎನಿಸಿದರೆ ಕಾಯ್ದೆಯ ಸೆಕ್ಷನ್ 12ರ ಪ್ರಕಾರ ಲೋಕಾಯುಕ್ತರು ಮತ್ತು ಉಪಲೋಕಾಯುಕ್ತರು ಸರ್ಕಾರಕ್ಕೆ ವರದಿ ಸಲ್ಲಿಸಿ ಶಿಫಾರಸು ಮಾಡುತ್ತಾರೆ. ಅಂತಹ ವರದಿಗಳನ್ನು ಪರಿಶೀಲಿಸಿ ಕ್ರಮ ಕೈಗೊಂಡ ವರದಿಯನ್ನು ಮೂರು ತಿಂಗಳೊಳಗೆ ಲೋಕಾಯುಕ್ತರಿಗೆ ಸರ್ಕಾರ ಸಲ್ಲಿಸಬೇಕು. ಆದರೆ, ವರ್ಷಗಳು ಕಳೆದರೂ ಅಧಿಕಾರಿಗಳು ಈ ವರದಿಗಳನ್ನು ಮೂಲೆಗೆ ಸರಿಸಿದ್ದಾರೆ’ ಎಂದು ದೂರಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು