ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ ಅವರಿಗೆ ಕಸಾಪ ಸದಸ್ಯತ್ವ

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಆಜೀವ ಸದಸ್ಯತ್ವ ಪಡೆದುಕೊಂಡಿದ್ದಾರೆ.
ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರು ಸದಸ್ಯತ್ವ ಪ್ರತಿಯನ್ನು ಪಾಟೀಲ ಅವರಿಗೆ ಹಸ್ತಾಂತರಿಸಿ, ‘ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ರೂಪಿ ಸುವ ಉದ್ದೇಶದಿಂದ ‘ಮನೆ ಮನೆಗೆ ಕನ್ನಡ ಸಾಹಿತ್ಯ ಪರಿಷತ್ತು’ ಅಭಿಯಾನ ಪ್ರಾರಂಭಿಸಲಾಗಿದೆ. ಇದರ ಭಾಗವಾಗಿ ರಾಜ್ಯದಾದ್ಯಂತ ಜನಸಾಮಾನ್ಯರು, ಗಣ್ಯರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನ ಮಾಡಿದ ಮಹನೀಯರುಗಳ ಮನೆ ಹಾಗೂ ಕಚೇರಿಗೆ ಭೇಟಿ ನೀಡಲಾಗುತ್ತಿದೆ’ ಎಂದರು.
‘ಲೋಕಾಯುಕ್ತದಲ್ಲಿರುವ ಎಲ್ಲ ಸಿಬ್ಬಂದಿ ಪರಿಷತ್ತಿನ ಸದಸ್ಯತ್ವ ಪಡೆದುಕೊಳ್ಳಬೇಕು’ ಎಂದು ಆಶಯ ವ್ಯಕ್ತಪಡಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಬಿ.ಎಸ್. ಪಾಟೀಲ, ‘ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಪ್ರತೀಕವಾಗಿದೆ. ಇದು ಜನಸಾಮಾನ್ಯರ ಪರಿಷತ್ತಾಗುವ ವಿಶ್ವಾಸವಿದೆ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.