ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹40 ಲಕ್ಷ ಲಂಚ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಬಂಧನ

Last Updated 2 ಮಾರ್ಚ್ 2023, 15:53 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ(ಕೆಎಸ್ ಡಿಎಲ್) ರಾಸಾಯನಿಕ ಪೂರೈಸುವ ಟೆಂಡರ್ ಪ್ರಕ್ರಿಯೆಯಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ₹ 40 ಲಕ್ಷ‌ ಲಂಚ ಪಡೆದ ಕಾರ್ಖಾನೆಯ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ.

ಪ್ರಶಾಂತ್ ಮಾಡಾಳ್ ಬೆಂಗಳೂರು ಜಲಮಂಡಳಿ ಮುಖ್ಯ ಲೆಕ್ಕಾಧಿಕಾರಿ. ತಂದೆಯ ಪರವಾಗಿ ಲಂಚದ ಹಣ ಪಡೆಯುತ್ತಿದ್ದಾಗ ದಾಳಿಮಾಡಿದ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರು ಬಂಧಿಸಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ಪ್ರಶಾಂತ್, ನಿಯೋಜನೆ ಮೇಲೆ ಬೆಂಗಳೂರು ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ. ಅವರು ಹೊಂದಿರುವ ಖಾಸಗಿ ಕಚೇರಿಯೊಂದರಲ್ಲಿ‌ ಸಂಜೆ 6.45ಕ್ಕೆ ಲಂಚದ ಹಣ ಪಡೆಯುವಾಗ ಬಂಧಿಸಲಾಗಿದೆ‌.

ಕೆಎಸ್‌ಡಿಎಲ್‌ಗೆ ರಾಸಾಯನಿಕ ಪೂರೈಕೆಗೆ ಆಯ್ಕೆಯಾಗಿರುವ ಗುತ್ತಿಗೆದಾರರಿಂದ ಮಾಡಾಳ್ ವಿರೂಪಾಕ್ಷಪ್ಪ ₹81 ಲಕ್ಷ‌ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣವನ್ನು ಮಗನಿಗೆ ತಲುಪಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದರು ಎಂದು ಲೋಕಾಯುಕ್ತದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT