ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲುಷಿತ ನೀರು: ವಿಚಾರಣೆ ಆರಂಭಿಸಿದ ಲೋಕಾಯುಕ್ತ

‘ಪ್ರಜಾವಾಣಿ’ ವರದಿ ಪರಿಣಾಮ
Last Updated 6 ಜುಲೈ 2022, 19:26 IST
ಅಕ್ಷರ ಗಾತ್ರ

ಬೆಂಗಳೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಗೋರ್ಕಲ್‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಲ್ಕಂದಿನ್ನಿ ಮತ್ತು ಜುಕೂರ ಗ್ರಾಮಗಳಲ್ಲಿ ಕಲುಷಿತ ನೀರು ಕುಡಿದು 8 ಮಂದಿ ಸಾವಿಗೀಡಾಗಿ, ಹಲವರು ಅನಾರೋಗ್ಯಕ್ಕೊಳಗಾದ ಘಟನೆ ಕುರಿತು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ಆರಂಭಿಸಿದ್ದಾರೆ.‌

‘ಕಲುಷಿತ ನೀರು ಕುಡಿದು ಮಹಿಳೆ ಸಾವು; 40ಕ್ಕೂ ಹೆಚ್ಚು ಜನ ಅಸ್ವಸ್ಥ’ ಶೀರ್ಷಿಕೆ ಅಡಿಯಲ್ಲಿ ‘ಪ್ರಜಾವಾಣಿ’ಯ ಜುಲೈ 4ರ ಸಂಚಿಕೆಯಲ್ಲಿ ವರದಿ ಪ್ರಕಟವಾಗಿತ್ತು. ವರದಿಯ ತುಣುಕನ್ನು ಲಗತ್ತಿಸಿ ಲೋಕಾಯುಕ್ತರಿಗೆ ಇ–ಮೇಲ್‌ ಕಳುಹಿಸಿದ್ದ ‘ನೈಜ ಹೋರಾಟಗಾರರ ವೇದಿಕೆ’ಯ ಎಚ್‌.ಎಂ. ವೆಂಕಟೇಶ್‌, ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದರು. ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕೊಂಡು ವಿಚಾರಣೆ ಆರಂಭಿಸಿರುವ ಲೋಕಾಯುಕ್ತರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ನಿರ್ದೇ ಶಕರು, ರಾಯಚೂರು ಜಿಲ್ಲಾ ಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಮಾನ್ವಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಗೋರ್ಕಲ್‌ ಗ್ರಾಮ ಪಂಚಾ ಯಿತಿಯ ಪಿಡಿಒ ಹಾಗೂ ಅಧ್ಯಕ್ಷರಿಗೆ ನೋಟಿಸ್‌ ಜಾರಿಗೊಳಿಸಿದ್ದಾರೆ.

‘ತಕ್ಷಣದಿಂದಲೇ ಎರಡೂ ಗ್ರಾಮ ಗಳ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ವ್ಯವಸ್ಥೆ ಮಾಡಬೇಕು. ಈ ಕುರಿತು ಆಗಸ್ಟ್‌ 25ರಂದು ನಡೆಯುವ ವಿಚಾರಣೆ ವೇಳೆ ವರದಿ ಸಲ್ಲಿಸಬೇಕು’ ಎಂದು ಲೋಕಾಯುಕ್ತರು ಪ್ರತಿವಾದಿಗಳಿಗೆ ನಿರ್ದೇಶನ ನೀಡಿದ್ದಾರೆ. ಎರಡೂ ಗ್ರಾಮಗಳಿಗೆ ಖುದ್ದಾಗಿ ಭೇಟಿನೀಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಎಸ್‌ಪಿಗೆ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT