ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7.50 ಟನ್ ತೂಕದ ವಾಹನಗಳ ಸಂಚಾರಕ್ಕೆ ಅವಕಾಶ: ಮುಷ್ಕರ ಕೈಬಿಟ್ಟ ಲಾರಿ ಮಾಲೀಕರು

Last Updated 16 ಮಾರ್ಚ್ 2023, 12:25 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ 7.50 ಟನ್ ತೂಕದವರೆಗಿನ ವಾಹನಗಳ ಸಂಚಾರಕ್ಕೆ ಅವಕಾಶ ಸಿಕ್ಕಿದ್ದು, ಲಾರಿ ಮಾಲೀಕರು ಹಾಗೂ ಏಜೆಂಟರು ತಾವು ಕರೆ ನೀಡಿದ್ದ ಮುಷ್ಕರವನ್ನು ಕೈ ಬಿಟ್ಟಿದ್ದಾರೆ.

ನಗರದಲ್ಲಿ ನಿತ್ಯವೂ ಬೆಳಿಗ್ಗೆ 8ರಿಂದ 11 ಗಂಟೆವರೆಗೆ ಹಾಗೂ ಸಂಜೆ 4ರಿಂದ 8 ಗಂಟೆವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ಇದನ್ನು ಖಂಡಿಸಿದ್ದ ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಸಂಘ, ಮಾರ್ಚ್ 16ರಂದು ತಡರಾತ್ರಿಯಿಂದ ಮುಷ್ಕರಕ್ಕೆ ಕರೆ ನೀಡಿತ್ತು.

ರಾಜ್ಯ ಸರ್ಕಾರದ ಸೂಚನೆಯಂತೆ ಲಾರಿ ಮಾಲೀಕರು, ಏಜೆಂಟರ ಜೊತೆ ಬೆಂಗಳೂರು ವಿಶೆಷ ಕಮಿಷನರ್ (ಸಂಚಾರ) ಎಂ.ಎ. ಸಲೀಂ ಗುರುವಾರ ಸಭೆ ನಡೆಸಿದರು.

‘ನಗರದಲ್ಲಿ ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ನಿಯಮದಲ್ಲಿ ಬದಲಾವಣೆ ಮಾಡಿ, 7.50 ಟನ್ ತೂಕದವರೆಗಿನ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದು ಸಲೀಂ ಭರವಸೆ ನೀಡಿದರು.
ಇದಕ್ಕೆ ಒಪ್ಪಿದ ಲಾರಿ ಮಾಲೀಕರು ಹಾಗೂ ಏಜೆಂಟರು, ಮುಷ್ಕರ ಹಿಂಪಡೆದಿರುವುದಾಗಿ ಘೋಷಿಸಿದರು. ಸಭೆಯಲ್ಲಿ ಸಂಘದ ಅಧ್ಯಕ್ಷ ಷಣ್ಮುಖಪ್ಪ, ಕಾರ್ಯದರ್ಶಿ ಕೆ.ಎನ್. ಅಶ್ವತ್ಥ್, ಜಂಟಿ ಕಾರ್ಯದರ್ಶಿ ಮಧು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT