ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೀಮೆಎಣ್ಣೆ ವಿತರಣೆ ಸರ್ಕಾರದ ಜವಾಬ್ದಾರಿ: ಹೈಕೋರ್ಟ್

Last Updated 3 ಡಿಸೆಂಬರ್ 2020, 16:15 IST
ಅಕ್ಷರ ಗಾತ್ರ

ಬೆಂಗಳೂರು: ‘ಎಲ್‌ಪಿಜಿ ಸಂಪರ್ಕ ಹೊಂದಿರದ ಬಿಪಿಎಲ್‌ ಕಾರ್ಡುದಾರರಿಗೆ ತಿಂಗಳಿಗೆ ಮೂರು ಲೀಟರ್ ಸೀಮೆಎಣ್ಣೆ ಪೂರೈಸುವುದು ಸರ್ಕಾರದ ಜವಾಬ್ದಾರಿ’ ಎಂದು ಹೈಕೋರ್ಟ್‌ ಹೇಳಿದೆ.

ವಕೀಲ ಎಸ್.ಚಂದ್ರಶೇಖರಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಅಭಿಪ್ರಾಯಪಟ್ಟಿದೆ.

‘2016 ರ ಜುಲೈ 27ರಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ ಮೂರು ಲೀಟರ್ ಸೀಮೆಎಣ್ಣೆಯನ್ನು ಸರ್ಕಾರ ನೀಡಲೇಬೇಕು. ಅದನ್ನು ಸೂಕ್ಷ್ಮವಾಗಿ ಕಾರ್ಯಗತಗೊಳಿಸಬೇಕು ಮತ್ತು ಅಧಿಸೂಚನೆ ಚಾಲ್ತಿಯಲ್ಲಿಯೇ ಇರುವಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT