ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15 ಸಚಿವರ ವಿರುದ್ಧ ದೂರು ಕೊಟ್ಟ ರೇಣುಕಾಚಾರ್ಯ

Last Updated 29 ಜನವರಿ 2022, 15:47 IST
ಅಕ್ಷರ ಗಾತ್ರ

ಬೆಂಗಳೂರು: 15ಕ್ಕೂ ಹೆಚ್ಚು ಸಚಿವರು ಬಿಜೆಪಿ ಶಾಸಕರ ಅಹವಾಲುಗಳಿಗೆ ಸ್ಪಂದಿಸುತ್ತಿಲ್ಲ. ಶಾಸಕರ ದೂರವಾಣಿ ಕರೆಗಳನ್ನೂ ಸ್ವೀಕರಿಸುವುದಿಲ್ಲ ಎಂದು ದೂರಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ದೂರು ಸಲ್ಲಿಸಿದ್ದಾರೆ.

ಬೊಮ್ಮಾಯಿ ಮತ್ತು ಕಟೀಲ್‌ ಅವರನ್ನು ಭೇಟಿ ಮಾಡಿ ಲಿಖಿತ ದೂರು ಸಲ್ಲಿಸಿರುವ ರೇಣುಕಾಚಾರ್ಯ, ‘ಕೆಲವು ಸಚಿವರು ತಮ್ಮಿಂದಲೇ ಈ ಸರ್ಕಾರ ಬಂದಿದೆ ಎಂಬ ದುರಹಂಕಾರದ ವರ್ತನೆ ಪ್ರದರ್ಶಿಸುತ್ತಿದ್ದಾರೆ. ಖುದ್ದಾಗಿ ಭೇಟಿಮಾಡಿ ಪತ್ರಗಳನ್ನು ನೀಡಿದರೆ, ಆಪ್ತ ಸಹಾಯಕರಿಂದ ಸಹಿ ಮಾಡಿಸಿ ಅಧಿಕಾರಿಗಳಿಗೆ ನೀಡುತ್ತಾರೆ. ಸಚಿವರ ಆಪ್ತ ಕಾರ್ಯದರ್ಶಿಗಳೂ ದೂರವಾಣಿ ಕರೆ ಸ್ವೀಕರಿಸುವುದಿಲ್ಲ. ಅಂತಹ ಸಚಿವರಿಗೆ ತಿಳಿ ಹೇಳಬೇಕು. ಪಕ್ಷದ ಶಾಸಕರಿಗೆ ಸ್ಪಂದಿಸುವಂತೆ ತಾಕೀತು ಮಾಡಬೇಕು ಎಂದು ಕೋರಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

‘ಸಚಿವರೊಬ್ಬರನ್ನು ಭೇಟಿಮಾಡಲು ದೂರವಾಣಿ ಕರೆ ಮಾಡಿದ್ದೆ. ಸಚಿವರಿಗೆ ಕೋವಿಡ್‌ ದೃಢಪಟ್ಟಿರುವುದಾಗಿ ಅವರ ಆಪ್ತ ಕಾರ್ಯದರ್ಶಿ ಮಾಹಿತಿ ನೀಡಿದ್ದರು. ಆದರೆ, ಅದೇ ದಿನ ಸಚಿವರು ಸಂಪುಟ ಸಭೆಯಲ್ಲಿ ಪಾಲ್ಗೊಂಡಿದ್ದರು. ಪಕ್ಷದ ಶಾಸಕರಾದ ನಮಗೇ ಸುಳ್ಳು ಹೇಳುತ್ತಿದ್ದಾರೆ. ಈ ವರ್ತನೆಯನ್ನು ತಿದ್ದಿಕೊಳ್ಳುವಂತೆ ಸಚಿವರಿಗೆ ನಿರ್ದೇಶನ ನೀಡಬೇಕು’ ಎಂಬ ಒತ್ತಾಯವನ್ನೂ ಮಾಡಿದ್ದಾರೆ ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT