ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದವಿ ಕಾಲೇಜುಗಳಲ್ಲಿ ಪ್ರವೇಶಾವಕಾಶ ಹೆಚ್ಚಿಸಿ: ದೊರೆಸ್ವಾಮಿ

Last Updated 22 ಜುಲೈ 2021, 20:18 IST
ಅಕ್ಷರ ಗಾತ್ರ

ಬೆಂಗಳೂರು: ‘ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ 6.5 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ರಾಜ್ಯದ ಪದವಿ ಕಾಲೇಜುಗಳಲ್ಲಿ ಪ್ರವೇಶಾತಿ ಅವಕಾಶ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರದ ಶೈಕ್ಷಣಿಕ ಸಲಹೆಗಾರ ಪ್ರೊ. ಎಂ.ಆರ್. ದೊರೆಸ್ವಾಮಿ ಸಲಹೆ ನೀಡಿದ್ದಾರೆ.

‘ತೇರ್ಗಡೆಯಾಗಿರುವ ಎಲ್ಲ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿರುವ ಪದವಿ ಕಾಲೇಜುಗಳಲ್ಲಿ ಪ್ರವೇಶಾತಿ ನೀಡಲು ಸದ್ಯಕ್ಕೆ ಅವಕಾಶಗಳಿಲ್ಲ. ಈ ಶೈಕ್ಷಣಿಕ ವರ್ಷಕ್ಕೆ ಸೀಮಿತವಾಗಿರುವಂತೆ ರಾಜ್ಯದಲ್ಲಿನ ಎಲ್ಲ ಸ್ವಾಯತ್ತ, ಸಂಯೋಜಿತ ಕಾಲೇಜುಗಳಲ್ಲಿ ಪ್ರಸ್ತುತ ಲಭ್ಯವಿರುವ ಎಲ್ಲ ಪದವಿ ಕೋರ್ಸ್‌ಗಳ ಪ್ರವೇಶಾತಿಗಾಗಿ ತಲಾ ಒಂದು ಹೆಚ್ಚುವರಿ ವಿಭಾಗ (ಸೆಕ್ಷನ್‌) ಪ್ರಾರಂಭಿಸಲು ಅನುಮತಿ ಕೊಡಬಹುದಾಗಿದೆ’ ಎಂದು ಅವರು ಶಿಫಾರಸು ಮಾಡಿದ್ದಾರೆ.

ಈ ಕುರಿತು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದೂ ಅವರು ಸಲಹೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT