ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಠ, ಮುರುಘಾ ಪರಂಪರೆಯ ಜೊತೆ ಇದ್ದೇವೆ: ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ

ಮಾದಾರ ಚನ್ನಯ್ಯ ಗುರುಪೀಠ
Last Updated 30 ಆಗಸ್ಟ್ 2022, 6:53 IST
ಅಕ್ಷರ ಗಾತ್ರ

ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆ ನಡೆಯುತ್ತಿದ್ದು, ಪ್ರತಿಕ್ರಿಯೆ ನೀಡುವುದು ಕಷ್ಟ. ಆದರೆ, ಮಠ ಹಾಗೂ ಮುರುಘಾ ಪರಂಪರೆಯ ಜೊತೆಗೆ ನಾವು ಬದ್ಧವಾಗಿ ನಿಲ್ಲುತ್ತೇವೆ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾವು‌ ಶಿವಮೂರ್ತಿ ಮುರುಘಾ ಶರಣರ ಶಿಷ್ಯರು. ಮುರುಘಾ ಮಠಕ್ಕೆ ಬಹುದೊಡ್ಡ ಪರಂಪರೆ ಇದೆ. ಶತಮಾನಗಳ ಇತಿಹಾಸವಿದೆ. ಕರ್ನಾಟಕದ ಧಾರ್ಮಿಕ ಪರಂಪರೆಯಲ್ಲಿ ಮುರುಘಾ ಮಠ ಪ್ರಧಾನ ಸ್ಥಾನದಲ್ಲಿದೆ' ಎಂದು ಹೇಳಿದರು.

'ಮುರುಘಾ ಮಠದ ಪೀಠ ಹಾಗೂ ಪೀಠಾಧ್ಯಕ್ಷರ ಮೇಲೆ ಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ನಾವು ಮಾತನಾಡಲು ಸಾಧ್ಯವಿಲ್ಲ. ಮಠದ ಭಕ್ತರು, ಆಡಳಿತ ಮಂಡಳಿ, ವೀರಶೈವ ಲಿಂಗಾಯತ ಸಮುದಾಯದ ಮುಖಂಡರಿಗೆ ಬಿಟ್ಟ ವಿಚಾರ. ಷಡ್ಯಂತ್ರಕ್ಕೆ ಸಂಬಂಧಿಸಿದಂತೆ ರಾಜಕಾರಣಿಗಳಂತೆ ನಾವು ಮಾತನಾಡಲು ಆಗದು' ಎಂದು ಹೇಳಿದರು.

ಗಾಣಿಗ ಮಠದ ಬಸವಕುಮಾರ್ ಸ್ವಾಮೀಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT