VIDEO: ಡಿ.ಕೆ. ಶಿವಕುಮಾರ್ ಜತೆ ಮಧು ಬಂಗಾರಪ್ಪ ಸಮಾಲೋಚನೆ

ಬೆಂಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಸಜ್ಜಾಗಿರುವ ಸೊರಬ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಶುಕ್ರವಾರ ಬೆಳಿಗ್ಗೆ ಭೇಟಿಮಾಡಿ ಸಮಾಲೋಚನೆ ನಡೆಸಿದರು.
ಸದಾಶಿವನಗರದ ಶಿವಕುಮಾರ್ ಅವರ ನಿವಾಸದಲ್ಲಿ ಇಬ್ಬರ ಭೇಟಿ ನಡೆಯಿತು.
ಮಧು ಬಂಗಾರಪ್ಪ ಅವರ ಕೆಲವು ಬೆಂಬಲಿಗರೂ ಜತೆಗಿದ್ದರು.
'ನಾನು ಈಗಿನಿಂದಲೇ ಕಾಂಗ್ರೆಸಿಗ. ಅಧಿಕೃತವಾಗಿ ಪಕ್ಷ ಸೇರುವುದಷ್ಟೇ ಬಾಕಿ ಇದೆ' ಎಂದು ಮಧು ಬಂಗಾರಪ್ಪ ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.