ಶಿವಮೊಗ್ಗ: ‘ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಮತದಾರರ ಸಂಖ್ಯೆ ಶೇ 55ರಷ್ಟಿದ್ದು, ಟಿಕೆಟ್ ಹಂಚಿಕೆ ವೇಳೆ ಈ ವರ್ಗದ ಅಭ್ಯರ್ಥಿಗಳಿಗೆ ಆದ್ಯತೆ ನೀಡುವಂತೆ ಹೈಕಮಾಂಡ್‌ಗೆ ಮನವಿ ಮಾಡಲಾಗಿದೆ’ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.
‘ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಬೇಕಿದೆ. ಹೀಗಾಗಿ ಗೆಲ್ಲುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಶಿವಮೊಗ್ಗದಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ ಹಾಗೂ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ನಡುವಿನ ‘ಧಾರಾವಾಹಿ’ಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ. ಅದರ ನಿರ್ಮಾಣ ಹಾಗೂ ಪ್ರಾಯೋಜಕತ್ವವೂ ನಮ್ಮದಲ್ಲ’ ಎಂದು ಪ್ರತಿಕ್ರಿಯಿಸಿದ ಅವರು, ‘ಆಯನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡಲಿದೆ ಎಂಬುದೆಲ್ಲ ಊಹಾಪೋಹ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.