ಮಧುರಚನ್ನ, ಸಿಂಪಿ ಲಿಂಗಣ್ಣ ಪ್ರಶಸ್ತಿ ಸ್ಥಾಪನೆ
ವಿಜಯಪುರ: ‘ಜಾನಪದ ಕ್ಷೇತ್ರಕ್ಕೆ ಮಹತ್ತರ ಕಾಣಿಕೆ ನೀಡಿರುವ ಜಿಲ್ಲೆಯ ಮಧುರ ಚನ್ನರು ಹಾಗೂ ಸಿಂಪಿ ಲಿಂಗಣ್ಣ ಅವರ ಹೆಸರಿನಲ್ಲಿ ಜಾನಪದ ಪರಿಷತ್ ವತಿಯಿಂದ ರಾಜ್ಯ ಮಟ್ಟದ ಪ್ರಶಸ್ತಿ ಸ್ಥಾಪಿಸಲಾಗಿದ್ದು ಈ ವರ್ಷದಿಂದ ನೀಡಲಾಗುತ್ತಿದೆ’ ಎಂದು ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಾ.ಎಸ್.ಬಾಲಾಜಿ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಪ್ರಶಸ್ತಿ ಮೊತ್ತ ತಲಾ ₹5,000 ಒಳಗೊಂಡಿದ್ದು ಇನ್ನೊಂದು ತಿಂಗಳಲ್ಲಿ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ’ ಎಂದರು.
‘ಅವರ ಹೆಸರಿನಲ್ಲಿ ವಿಚಾರ ಸಂಕಿರಣ ಮತ್ತು ತಮಟೆ ಕಾರ್ಯಕ್ರಮ ಆಯೋಜಿಸಲಾಗುವುದು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಅಧ್ಯಯನ ಪೀಠ ಸ್ಥಾಪಿಸಲು, ಪಠ್ಯ ಪುಸ್ತಕ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು’ ಎಂದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.