ಬುಧವಾರ, ಮೇ 25, 2022
29 °C

ಮೇಕೆದಾಟು ಪಾದಯಾತ್ರೆ ಮಾದರಿಯಲ್ಲೇ ಮಹದಾಯಿ ಹೋರಾಟ: ಸತೀಶ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಕೋವಿಡ್‌ ಸೋಂಕು ಹರಡುವಿಕೆ ಕಡಿಮೆಯಾದ ಬಳಿಕ ಮೇಕೆದಾಟು ಪಾದಯಾತ್ರೆ ಮಾದರಿಯಲ್ಲಿಯೇ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಹೋರಾಟ ನಡೆಸಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಆ ಹೋರಾಟ ಎಲ್ಲಿಂದ ಆರಂಭ ಮಾಡಬೇಕು ಎನ್ನುವುದನ್ನು ಪಕ್ಷದ ನಾಯಕರೊಂದಿಗೆ ಚರ್ಚಿಸಿ, ರೂಪುರೇಷೆ ತಯಾರಿಸಲಾಗುವುದು. ಪಾದಯಾತ್ರೆ ನಡೆಸುವುದು ನಿಶ್ಚಿತ’ ಎಂದರು.

‘ಮೇಕೆದಾಟು ಜಲಾಶಯ ನಿರ್ಮಾಣದ ಬಗ್ಗೆ ಹೋರಾಟ ಆರಂಭಿಸಿ ಸರ್ಕಾರದ ಗಮನಸೆಳೆಯಲಾಗಿದೆ. ಆ ಹೋರಾಟ ಅರ್ಧಕ್ಕೆ ನಿಂತಿಲ್ಲ; ಯಶ್ವಸಿಯಾಗಿದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು