ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇಶ್ವರ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶ

Last Updated 11 ಮಾರ್ಚ್ 2022, 20:43 IST
ಅಕ್ಷರ ಗಾತ್ರ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ‘ಮಲೆ ಮಹದೇಶ್ವರ ವನ್ಯಜೀವಿ ಧಾಮ’ವನ್ನು ‘ಮಲೆ ಮಹದೇಶ್ವರ ಹುಲಿ ಸಂರಕ್ಷಿತ ಪ್ರದೇಶ’ವೆಂದು ಘೋಷಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಮಹದೇಶ್ವರ ಬೆಟ್ಟ, ಹನೂರು, ಯಡೆಯಾರಳ್ಳಿ ರಕ್ಷಿತ ಅರಣ್ಯವನ್ನು ಒಗ್ಗೂಡಿಸಿ 906 ಚದರ ಕಿ.ಮೀ ವಿಸ್ತೀರ್ಣವನ್ನು ಇದರ ವ್ಯಾಪ್ತಿಗೆ ತರಲಾಗುವುದು. ಈ ಸಂಬಂಧ 2018 ರ ಹುಲಿ ಗಣತಿಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರಕ್ಕೆ ಪ್ರಸ್ತಾವನೆಸಲ್ಲಿಸಿತ್ತು. ರಾಜ್ಯದಲ್ಲಿ ಒಟ್ಟು 5 ಹುಲಿ ಸಂರಕ್ಷಿತ ಪ್ರದೇಶಗಳಿದ್ದು, ಮಲೆ ಮಹದೇಶ್ವರ ಹುಲಿ ಸಂರಕ್ಷಿತ ಆರನೆಯದಾಗಿದೆ. ಇಲ್ಲಿ ಸುಮಾರು 18 ರಿಂದ 20 ಹುಲಿಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT