ಮಂಗಳವಾರ, ಜನವರಿ 31, 2023
19 °C

ಮಹಾರಾಷ್ಟ್ರ ಮಂತ್ರಿಗಳು ಬೆಳಗಾವಿಗೆ ಬರುವುದು ಸೂಕ್ತವಲ್ಲ: ಸಿಎಂ ಬೊಮ್ಮಾಯಿ

'ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಾರಾಷ್ಟ್ರ ಮಂತ್ರಿಗಳು ಬೆಳಗಾವಿಗೆ  ಬರುವುದು ಸೂಕ್ತವಲ್ಲ ಎಂದು ಲಿಖಿತವಾಗಿ ಸೂಚಿಸಿದ್ದರೂ ಬರುತ್ತಿರುವುದು ಸೂಕ್ತವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ಯಾರು  ಎಲ್ಲಿ ಬೇಕಾದರೂ ಓಡಾಡುವ ಸ್ವಾತಂತ್ರ್ಯ ವಿದೆ ಎಂದು  ನಮಗೂ ತಿಳಿದಿದೆ.   ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ  ಸಂಬಂಧ ಪಟ್ಟ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ  ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಮ್ಮ ಸರ್ಕಾರ ಕೆಲವು ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು. 

ಕಾನೂನಾತ್ಮಕ  ಹೋರಾಟ:
ಈ ರೀತಿಯ ಕ್ರಮ ಸರಿಯಾದುದಲ್ಲ. ಗಡಿ ವಿವಾದ ಬಗೆಹರಿದಿದ್ದರೂ ಸುಪ್ರೀಂ ಕೋರ್ಟಿನಲ್ಲಿ ವ್ಯಾಜ್ಯ ಹೂಡಿದ್ದಾರೆ. ಕಾನೂನಾತ್ಮಕ ವಾಗಿ ಇಬ್ಬರೂ ಹೋರಾಡುತ್ತೇವೆ. ಆದರೆ ಎರಡೂ ರಾಜ್ಯದ ಜನರು ಸಾಮರಸ್ಯದಿಂದಿದ್ದು, ಇಲ್ಲಿ ಕಾನೂನು ಸುವ್ಯವಸ್ಥೆ ಕದಡುವ ಯಾವುದೇ ಕೆಲಸ ಮಾಡಬಾರದು ಎಂದು ಮಹಾರಾಷ್ಟ್ರ ಮುಖ್ಯ ಮಂತ್ರಿಗಳಲ್ಲಿ ಮನವಿ ಮಾಡುವುದಾಗಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು