ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಕ್ತಿಯನ್ನು ಸಾಯಿಸಬಹುದು, ಸಿದ್ದಾಂತವನ್ನಲ್ಲ: ಬಾಪುವನ್ನು ನೆನೆದ ಸಿದ್ದರಾಮಯ್ಯ

Last Updated 30 ಜನವರಿ 2022, 6:39 IST
ಅಕ್ಷರ ಗಾತ್ರ

ಬೆಂಗಳೂರು: ವ್ಯಕ್ತಿಯನ್ನು ಸಾಯಿಸಬಹುದು, ಸಿದ್ದಾಂತವನ್ನಲ್ಲ ಎಂದು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಭಾನುವಾರ ತಿಳಿಸಿದ್ದಾರೆ.

ಮಹಾತ್ಮ ಗಾಂಧೀಜಿ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಅವರು, ‘ಮಹಾತ್ಮ ಗಾಂಧೀಜಿ ಕೇವಲ ವ್ಯಕ್ತಿ ಅಲ್ಲ, ಅವರೊಂದು ಸಿದ್ದಾಂತ. ವ್ಯಕ್ತಿಯನ್ನು ಸಾಯಿಸಬಹುದು, ಸಿದ್ದಾಂತವನ್ನಲ್ಲ' ಎಂದು ಹೇಳಿದ್ದಾರೆ.

ಗಾಂಧೀಜಿಯವರ ತತ್ವ-ಸಿದ್ಧಾಂತದ ಹಾದಿಯಲ್ಲಿ‌ ಮುನ್ನಡೆದು ಅವರನ್ನು ಅಜರಾಮರರನ್ನಾಗಿ‌ ಮಾಡೋಣ ಎಂದೂ ಸಿದ್ದರಾಮಯ್ಯ ಟ್ವೀಟಿಸಿದ್ದಾರೆ.

ಇಂದು ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ. ಈ ಹಿನ್ನೆಲೆಯಲ್ಲಿ ಭಾರತದ ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದ ಹೋರಾಟಗಾರರ ಸ್ಮರಣೆಗಾಗಿ ದೇಶದಾದ್ಯಂತ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT