ಬೆಂಗಳೂರು: ‘ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆ ಆಗದಂತೆ ನಿಗಾ ವಹಿಸಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಇಲಾಖೆಯ ಆಯವ್ಯಯ ಅನುಷ್ಠಾನದ ಕುರಿತುಮುಖ್ಯಮಂತ್ರಿ ಗುರುವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
‘ಸದ್ಯ ರಾಜ್ಯದಲ್ಲಿ 1.26 ಲಕ್ಷ ಟನ್ ಡಿಎಪಿ ಲಭ್ಯವಿದ್ದು, ಒಟ್ಟಾರೆ 7.64 ಲಕ್ಷ ಟನ್ ರಸಗೊಬ್ಬರ ಲಭ್ಯವಿದೆ. ಬೇಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ (7.81 ಲಕ್ಷ ಕ್ವಿಂಟಲ್ )ಬಿತ್ತನೆ ಬೀಜ ಲಭ್ಯವಿದೆ. ರೈತರ ಬೇಡಿಕೆ ಪೂರೈಸಲು ಯಾವುದೇ ಕೊರತೆ ಇಲ್ಲ. ಆದರೆ, ನಕಲಿ ಬೀಜಗಳ ಹಾವಳಿ, ಕೃತಕ ಅಭಾವ ಸೃಷ್ಟಿ ಆಗದಂತೆ
ಎಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿದರು.
‘ಪ್ರಸಕ್ತ ಸಾಲಿನಲ್ಲಿ 114.54 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಅದರೊಂದಿಗೆ ಕಂದಾಯ ಇಲಾಖೆ ಹಾಗೂ ಜಲಸಂಪನ್ಮೂಲ ಇಲಾಖೆಗಳಿಂದ, ಬಂಜರು ಭೂಮಿ ಹಾಗೂ ಸವಳು-ಜವಳು ಭೂಮಿಯ ಮಾಹಿತಿ ಪಡೆದು, ಕನಿಷ್ಠ ತಲಾ ಒಂದು ಲಕ್ಷ ಹೆಕ್ಟೇರ್ ಬಂಜರು ಭೂಮಿ ಹಾಗೂ ಸವಳು-ಜವಳು ಭೂಮಿ
ಯನ್ನು ಕೃಷಿಯೋಗ್ಯವಾಗಿ ಪರಿವರ್ತಿಸಬೇಕು’ ಎಂದೂ ತಿಳಿಸಿದರು.
‘ದ್ವಿದಳ ಧಾನ್ಯ ಮತ್ತು ಎಣ್ಣೆಕಾಳು ಬೆಳೆಗಳ ಉತ್ಪಾದಕತೆಯನ್ನು ಸುಸ್ಥಿರ ಅಭಿವೃದ್ಧಿ ಗುರಿಯ ಮಟ್ಟಕ್ಕೆ
ಹೆಚ್ಚಿಸಲು ಕ್ರಿಯಾಯೋಜನೆ ರೂಪಿಸಬೇಕು, ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಹಂಚಿಕೆ ಮಾಡು
ವಾಗ ರೈತ ಉತ್ಪಾದಕ ಸಂಘಗಳಿಗೆ ಆದ್ಯತೆ ನೀಡಬೇಕು. ಕೃಷಿ ಸಿಂಚಾಯಿ ಯೋಜನೆಯಡಿ ಜಲಾ ನಯನ ಅಭಿವೃದ್ಧಿ ಕೆಲಸಗಳಿಗೇ ಒತ್ತು ನೀಡಬೇಕು, ಕೃಷಿ ಯಾಂತ್ರೀಕರಣ ಉತ್ತೇಜನಕ್ಕಾಗಿ ಪ್ರತಿ ಎಕರೆಗೆ ₹ 250
ರಂತೆ ಗರಿಷ್ಠ 5 ಎಕರೆಗೆ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆ
ಯನ್ನು ತಿಂಗಳ ಅಂತ್ಯದೊಳಗೆ ಜಾರಿಳಿಸಬೇಕು’ ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದರು.
ಕೃಷಿ ಸಚಿವ ಬಿ.ಸಿ. ಪಾಟೀಲ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.