ಮಂಗಳವಾರ, ಆಗಸ್ಟ್ 16, 2022
21 °C
ಸಿದ್ದರಾಮಯ್ಯಗೆ ಈಶ್ವರಪ್ಪ ಸವಾಲು

‘ಗೋ ಹತ್ಯೆ ವಿರುದ್ಧ ಹೇಳಿಕೆ ನೀಡಿ ಪಂಚಾಯಿತಿ ಚುನಾವಣೆ ಎದುರಿಸಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿಪಟೂರು (ತುಮಕೂರು): ಗೋವನ್ನು ಯಾರು ಬೇಕಾದರೂ ಕಡಿಯಲಿ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಎದುರಿಸಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದರು. 

ತಿಪಟೂರಿನಲ್ಲಿ ನಡೆದ ಗ್ರಾಮ ಸ್ವರಾಜ್ ಸಮಾವೇಶದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಬಗ್ಗೆ ಚರ್ಚೆಯಾಗಿದೆ.‌ ಆದಷ್ಟು ಬೇಗ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬರಲಿದೆ.‌  ಮುಸ್ಲಿಮರನ್ನು ಸಂತೃಪ್ತಿ ಪಡಿಸಲು ಸಿದ್ದರಾಮಯ್ಯ ಬಾಯಿಗೆ ಬಂದ ರೀತಿಯಲ್ಲಿ ಹೇಳಿಕೆ ಕೊಡುತ್ತಿದ್ದಾರೆ ಎಂದು ಟೀಕಿಸಿದರು.

ವಿಧಾನಸಭೆ ಚುನಾವಣೆಗೆ ವಹಿಸುವಷ್ಟೇ ಆಸಕ್ತಿಯನ್ನು ಗ್ರಾಮ ಪಂಚಾಯಿತಿ ಚುನಾವಣೆಗೂ ವಹಿಸಿದ್ದೇವೆ. ಶೇ 80ರಷ್ಟು ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರ ಹಿಡಿಯುವರು. ಪಂಚಾಯಿತಿ ಚುನಾವಣೆ ಗೆಲುವಿಗಾಗಿ ರಾಜ್ಯದಲ್ಲಿ ಆರು ತಂಡಗಳನ್ನು ರಚಿಸಿ ಓಡಾಟ ನಡೆಸಿದ್ದೇವೆ ಎಂದರು.

ಸಿ.ಪಿ.ಯೋಗೇಶ್ವರ್ ಸಂಪುಟ ಸೇರ್ಪಡೆ ವಿಚಾರ ಕುರಿತು ಯಾರು ಹೇಳಿಕೆ ಕೊಡದಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಆದೇಶವಿದೆ. ನಾವು ಅವರ ಆದೇಶ ಪಾಲಿಸುತ್ತೇವೆ. ಈ ಬಗ್ಗೆ ನಾನು ಮಾತನಾಡಲು ತಯಾರಿಲ್ಲ. ಪಕ್ಷದ ವರಿಷ್ಠರು, ಮುಖ್ಯಮಂತ್ರಿ, ರಾಜ್ಯ ಘಟಕದ ಅಧ್ಯಕ್ಷರು ಸೇರಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವರು. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು, ಬೇಡ ಎನ್ನುವುದು ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದರು. 

ಬೆಳಗಾವಿಯಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ, ಸಚಿವರ ಬದಲಾವಣೆ ಬಗ್ಗೆ ಚರ್ಚೆ ನಡೆಯುವುದಿಲ್ಲ. ಪಕ್ಷ ಸಂಘಟನೆ‌ ಹಾಗೂ ಸರ್ಕಾರದ ಬಗ್ಗೆ ಚರ್ಚೆಯಾಗಲಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು