ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್ಎಸ್ ಸಾಮಾಜಿಕ ನ್ಯಾಯದ ವಿರೋಧಿ: ಮಲ್ಲಿಕಾರ್ಜುನ ಖರ್ಗೆ

Last Updated 6 ಅಕ್ಟೋಬರ್ 2021, 7:53 IST
ಅಕ್ಷರ ಗಾತ್ರ

ಬೆಂಗಳೂರು: ಆರ್ ಎಸ್ ಎಸ್ ಸಾಮಾಜಿಕ ನ್ಯಾಯದ ವಿರೋಧಿಯಾಗಿರುವ ಸಂಘಟನೆ. ಮನುವಾದದ ಸಮರ್ಥನೆ ಮಾಡುವ ಈ ಸಂಘಟನೆ ಯಾವತ್ತೂ ಸಾಮಾಜಿಕ ನ್ಯಾಯದ ಪರ ನಿಂತಿಲ್ಲ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ‌ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,' ನಾನು ಜೀವನವಿಡೀ ಆರ್ ಎಸ್ ಎಸ್ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಆರ್ ಎಸ್ ಎಸ್ ವಿರುದ್ಧ ಇದ್ದೇನೆ. ಈ ವಿಷಯವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ' ಎಂದರು.

'ಆರ್ ಎಸ್ ಎಸ್ ಇಲ್ಲದಿದ್ದರೆ ನಮ್ಮ ದೇಶವೂ ಪಾಕಿಸ್ತಾನದಂತೆ ಆಗುತ್ತಿತ್ತು' ಎಂಬ ಸಚಿವ ಪ್ರಭು ಚೌಹಾಣ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, 'ಆರ್ ಎಸ್ ಎಸ್ ಸರ ಸಂಘಚಾಲಕರಾಗಿದ್ದ ಗೋಳ್ವಾಳ್ಕರ್ ಪುಸ್ತಕ ಓದಿ. ಸತ್ಯ ಏನು ಎಂಬುದು ಗೊತ್ತಾಗುತ್ತದೆ. ನನ್ನ ಚುನಾವಣಾ ಸೋಲಿಗೂ ಆರ್ ಎಸ್ ಎಸ್ ಕಾರಣ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT