ಭಾನುವಾರ, ಜುಲೈ 3, 2022
27 °C
ಲೂಟಿ ಅಂಗಡಿ ಹೇಳಿಕೆಗೆ ಮಲ್ಲಿಕಾರ್ಜುನ ‌ಖರ್ಗೆ ತಿರುಗೇಟು

ಕಟೀಲ್ ‘ಗುರು’ ಕೇಳಿದರೆ ಉತ್ತರಿಸುವೆ: ಖರ್ಗೆ ತಿರುಗೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ‘ಖರ್ಗೆ ಲೂಟಿ ಅಂಗಡಿ ಬಂದ್ ಆಗಿದೆ’ ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಟು ಟೀಕೆಗೆ ಉತ್ತರಿಸಿರುವ ರಾಜ್ಯಸಭೆ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ‌ಖರ್ಗೆ ಅವರು, ‘ದೆಹಲಿಯಲ್ಲಿ ಕುಳಿತಿರುವ ಅವರ ಗುರುಗಳು (ನರೇಂದ್ರ ಮೋದಿ) ಕೇಳಿದರೆ ಸೂಕ್ತ ಉತ್ತರ ನೀಡುತ್ತೇನೆ’ ಎಂದು ತಿರುಗೇಟು ನೀಡಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಟೀಲ್ ಹೇಳಿಕೆ ಅವರ ಪಕ್ಷದ ಸಂಸ್ಕೃತಿಯನ್ನು ತೋರಿಸುತ್ತದೆ. ಏನಾದರೂ ಪ್ರಶ್ನಿಸಿದರೆ ವ್ಯಂಗ್ಯ ಮಾಡುವುದನ್ನೇ ಕಲಿತಿದ್ದಾರೆ. ಅವರಿಗೆ ನಮ್ಮ ಪಕ್ಷದ ರಾಜ್ಯ ನಾಯಕರು ಸೂಕ್ತ ಉತ್ತರ ನೀಡುತ್ತಾರೆ’ ಎಂದರು.

ಚುನಾವಣೆ ಕಾರಣಕ್ಕೆ ಕೃಷಿ ಕಾಯ್ದೆ ವಾಪಸ್:‘ರೈತರ ಒತ್ತಡಕ್ಕೆ ಮಣಿದು ನರೇಂದ್ರ ಮೋದಿ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆದಿಲ್ಲ. ಚುನಾವಣೆ ಬಂದಿದೆ ಎಂದು ಹಿಂಪಡೆಯುತ್ತಿದ್ದಾರೆ. ಈಗ ಏಕಾಏಕಿ ಬಂದಿರುವ ರೈತರ ಬಗೆಗಿನ ಕಾಳಜಿ 700 ರೈತರು ತೀರಿಕೊಂಡಾಗ ಎಲ್ಲಿ ಹೋಗಿತ್ತು. ಈಗ ವಾಪಸ್ ಪಡೆಯುವ ಘೋಷಣೆ ಮಾಡಿದ್ದಾರೆ. ಇದು ಏಕವ್ಯಕ್ತಿ ಪ್ರದರ್ಶನ. ಅವರಿಗೆ ಸಂಸದೀಯ ಪ್ರಜಾಪ್ರಭುತ್ವದ ಬಗ್ಗೆ ಗೌರವವೇ ಇಲ್ಲದಂತಾಗಿದೆ’ ಎಂದು ಟೀಕಿಸಿದರು.

15 ವಿಚಾರಗಳ ಕುರಿತು ಚರ್ಚೆ: ಚಳಿಗಾಲದ ಅಧಿವೇಶನದಲ್ಲಿ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕೊಡಿಸುವ ಕಾಯ್ದೆ ತರುವುದು, ಪೆಗಾಸಸ್ ಹಗರಣ ಸೇರಿ 15 ವಿಷಯಗಳ ಕುರಿತು ಚರ್ಚಿಸಲು ನಿರ್ಧರಿಸಿದ್ದೇವೆ. ಈ ಬಗ್ಗೆ ವಿಸ್ತೃತ ಚರ್ಚೆಗೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ 25ರಂದು ಸಭೆ ಕರೆದಿದ್ದಾರೆ ‌
ಎಂದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು