ಸೋಮವಾರ, ಆಗಸ್ಟ್ 15, 2022
21 °C

ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ಜೆಸ್ಕಾಂ ಎಇಇ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ವೈಜಾಪುರ–ಬಮ್ಮನಳ್ಳಿ ಗ್ರಾಮದ ಮಧ್ಯದಲ್ಲಿ ಭಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳವನ್ನು ಕಾರಿನಲ್ಲಿ ದಾಟಲು ಯತ್ನಿಸಿದ ಅಫಜಲಪುರದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಿದ್ದಾರಾಮ ದಾನಪ್ಪ ಅವಟೆ ಅವರು ಗುರುವಾರ ಸಂಜೆ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಅವರೊಂದಿಗೇ ಕಾರಿನಲ್ಲಿದ್ದ ರಾಜಶೇಖರ ಬಸವರಾಜ ಕುಂಬಾರ ಈಜಿಕೊಂಡು ಪಾರಾಗಿದ್ದಾರೆ. ಹಳ್ಳದಲ್ಲಿ ನೀರಿನ ಪ್ರಮಾಣ ಕಡಿಮೆಯಾಗದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಇದೀಗ ಪೊಲೀಸರು ಅಫಜಲಪುರ–ಧುದನಿ ಭಾಗದಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.