ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌ ಸುರಿದು ಪತ್ನಿ, ಮೂವರು ಪುತ್ರಿಯರಿಗೆ ಬೆಂಕಿ; ಆರೋಪಿಗಾಗಿ ಹುಡುಕಾಟ

Last Updated 13 ಮಾರ್ಚ್ 2023, 23:30 IST
ಅಕ್ಷರ ಗಾತ್ರ

ಮಧುಗಿರಿ: ತಾಲ್ಲೂಕಿನ ಮುದ್ದನೇರಳೆಕೆರೆ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಮಲಗಿದ್ದ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳ ಮೇಲೆ ಸೋಮವಾರ ಬೆಳಗಿನ ಜಾವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ.

ಕೌಟುಂಬಿಕ ಕಲಹದಿಂದಾಗಿ ರಾಮಾಂಜನಪ್ಪ ಈ ಕೃತ್ಯ ಎಸಗಿದ್ದಾನೆ. ಆತನ ಪತ್ನಿ ಶಾಂತಮ್ಮ (35) ತೀವ್ರ ಸುಟ್ಟಗಾಯಗಳಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಮಕ್ಕಳಾದ ಅಕ್ಷಯಾ (17) ಅಕ್ಷತಾ (13) ಮತ್ತು ಅಮೃತಾ (10) ಅವರನ್ನು ಗ್ರಾಮಸ್ಥರು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಭಾನುವಾರ ರಾತ್ರಿ ದಂಪತಿ ಮಧ್ಯೆ ಜಗಳವಾಗಿತ್ತು. ಮೂವರು ಮಕ್ಕಳೊಂದಿಗೆ ಮಲಗಿದ್ದ ಪತ್ನಿ ಶಾಂತಮ್ಮ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ರಾಮಾಂಜನಪ್ಪ ಬಾಗಿಲಿಗೆ ಚಿಲಕ ಹಾಕಿ ಪರಾರಿಯಾಗಿದ್ದಾನೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT