ಬೆಂಗಳೂರು: ಮಂಡ್ಯ ಒಕ್ಕೂಟದಲ್ಲಿ(ಮನ್ಮುಲ್) ಹಾಲಿಗೆ ನೀರು ಬೆರಕೆ ಮಾಡಿ ಅಕ್ರಮ ಎಸಗಿರುವ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಾಲಿಗೆ ನೀರು ಬೆರೆಸಿ ಅಕ್ರಮ ನಡೆಸಿರುವುದು ಬೆಳಕಿಗೆ ಬಂದಿದೆ. ಈಗಾಗಲೇ ಪ್ರಾಥಮಿಕ ತನಿಖೆಗೆ ಆದೇಶ ಮಾಡಲಾಗಿದೆ. ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರನ್ನು ಹಿಂದಕ್ಕೆ ಕರೆಸಿ, ಅಲ್ಲಿಗೆ ಹೊಸ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಿಸಲಾಗಿದೆ ಎಂದರು.

ಐವರು ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತ್ತಿನಲ್ಲಿಡಲಾಗಿದೆ. ಹಾಲು ಒಕ್ಕೂಟದ ಮೇಲೆ ಕಲಂ 60ರ ಅನ್ವಯ ವಿಚಾರಣೆ ಆರಂಭಿಸಲಾಗಿದೆ. ಅದೇ ರೀತಿ ತಪ್ಪು ಎಸಗಿದ ಹಾಲು ಉತ್ಪಾದಕರ ಸಂಘದ ಮೇಲೆ ವಿಚಾರಣೆಗೂ ಆದೇಶ ನೀಡಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.