ಗುರುವಾರ , ಆಗಸ್ಟ್ 18, 2022
25 °C

ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಮಂಡ್ಯ JDS ಶಾಸಕ ಶ್ರೀನಿವಾಸ್: ವಿಡಿಯೊ ವೈರಲ್

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಡ್ಯ ಜೆಡಿಎಸ್ ಶಾಸಕ ಎಂ.ಶ್ರೀನಿವಾಸ್ ಅವರು ಸರ್ಕಾರಿ ಐಟಿಐ ಕಾಲೇಜು ಪ್ರಾಚಾರ್ಯ ನಾಗಾನಂದ್ ಅವರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ವೈರಲ್ ಆಗಿದೆ.

ಕಳೆದ ಸೋಮವಾರ ಐಟಿಐ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಶಾಸಕರ ವರ್ತನೆಗೆ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.

ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಐಟಿಐ ಕಾಲೇಜನ್ನು ಬೆಂಗಳೂರಿನಲ್ಲಿ ವರ್ಚುವಲ್ ಮೂಲಕ ಉದ್ಘಾಟನೆ ಮಾಡಿದ್ದರು.

ಇದಕ್ಕೂ ಮುಂಚೆ ಪರಿಶೀಲನೆಗೆ ತೆರಳಿದ್ದ ಶಾಸಕ ಎಂ.ಶ್ರೀನಿವಾಸ್ ಅವರು, ನಾಗಾನಂದ್ ಅವರಿಂದ ಕಾಲೇಜು ಸ್ವಚ್ಛತೆಯ ವಿಷಯದ ಬಗ್ಗೆ ಸ್ಪಷ್ಟನೆ ಕೇಳಲು ಕರೆದು ಸಿಬ್ಬಂದಿ ಹಾಗೂ ಅಧಿಕಾರಿಗಳ ಎದುರೇ ಎರಡು ಬಾರಿ ಕಪಾಳ ಮೋಕ್ಷ ಮಾಡಿದ್ದರು. ಕಾಲೇಜಿನಲ್ಲಿ ಸ್ವಚ್ಛತೆಯನ್ನು ನಿರ್ಲಕ್ಷಿಸಲಾಗಿತ್ತೆಂದು ಹಾಗೂ ಕಂಪ್ಯೂಟರ್ ಲ್ಯಾಬ್ ವಿಷಯದಲ್ಲಿ ಶಾಸಕ ಈ ರೀತಿ ನಡೆದುಕೊಂಡರು ಎನ್ನಲಾಗಿದೆ.

 

ಈ ಪ್ರಕರಣದ ಬಗ್ಗೆ ಮಾತನಾಡಿರುವ ನಾಗಾನಂದ್ ಅವರು, ‘ನಾನು ಕಾಲೇಜು ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತೇನೆ. ಆದರೆ, ಶಾಸಕರ ಅಂದಿನ ವರ್ತನೆ ಬಗ್ಗೆ  ಮಾತನಾಡಲು ಹೋಗುವುದಿಲ್ಲ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು