ಭಾನುವಾರ, ಜುಲೈ 25, 2021
26 °C

ಅಕ್ರಮ ಗಣಿಗಾರಿಕೆ: ಸತ್ಯದ ಪರ ನಿಂತಾಗ ಶತ್ರುಗಳು ಹೆಚ್ಚು – ಸುಮಲತಾ ಟ್ವೀಟ್

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಿಳೆಯರು ಅಧಿಕಾರದಲ್ಲಿರುವುದನ್ನು ಕೆಲವರು ಸಹಿಸಿಕೊಳ್ಳಲಾರರು. ಸತ್ಯದ ಪರವಾಗಿ ನಿಂತಾಗ ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿ ಸುಮಲತಾ ಮತ್ತು ಜೆಡಿಎಸ್ ನಾಯಕರ ಮಧ್ಯೆ ಕಳೆದ ಕೆಲವು ದಿನಗಳಿಂದ ವಾಕ್ಸಮರ ನಡೆಯುತ್ತಿದೆ. ಸುಮಲತಾ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ಓದಿ: ಕೆಆರ್‌ಎಸ್‌ಗೆ ಸುಮಲತಾನ್ನ ಅಡ್ಡಡ್ಡ ಮಲಗಿಸಿ: ಎಚ್‌ಡಿಕೆ ಹೇಳಿಕೆಗೆ ಸಂಸದೆ ಆಕ್ರೋಶ

ಇದೀಗ ಮತ್ತೆ ಟ್ವೀಟ್ ಮಾಡಿರುವ ಸುಮಲತಾ, ‘ಸತ್ಯದ ಪರವಾಗಿ ನಿಂತಾಗ ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ!’ ಎಂದು ಉಲ್ಲೇಖಿಸಿದ್ದಾರೆ.

ಕೆ.ಆರ್.ಎಸ್‌. ಅಣೆಕಟ್ಟೆಯನ್ನು ರಕ್ಷಿಸಬೇಕು ಮತ್ತು ಅಕ್ರಮ ಗಣಿಗಾರಿಕೆ ತಡೆಯಬೇಕು ಎಂದೂ ಅವರು ಹ್ಯಾಷ್‌ಟ್ಯಾಗ್ ಮೂಲಕ ಉಲ್ಲೇಖಿಸಿದ್ದಾರೆ.

ಓದಿ: ದೇಶದ್ರೋಹದ ಹೇಳಿಕೆ ನೀಡಿದ ಸುಮಲತಾ: ರವೀಂದ್ರ ಶ್ರೀಕಂಠಯ್ಯ

ಇನ್ನಷ್ಟು...

ಅಕ್ರಮ ಗಣಿಗಾರಿಕೆ ವಿರುದ್ಧದ ನನ್ನ ಹೋರಾಟ ನಿಲ್ಲಲ್ಲ: ಎಚ್‌ಡಿಕೆ ಟ್ವೀಟ್‌ಗೆ ಸುಮಲತಾ ಉತ್ತರ

ಅಂಬರೀಷ್‌ ಸ್ಮಾರಕ ವಿಚಾರದಲ್ಲಿ ಕಣ್ಣೀರು ಹಾಕಿಸಿದ್ದ ಎಚ್‌ಡಿಕೆ: ಸುಮಲತಾ ಆರೋಪ

ನಾಡು ನುಡಿಗಾಗಿ ಹೋರಾಡೋಣ, ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ: ಎಚ್‌ಡಿಕೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು