ಮಂಗಳವಾರ, ಮಾರ್ಚ್ 28, 2023
32 °C

ಅಕ್ರಮ ಗಣಿಗಾರಿಕೆ ಪರಿಣಾಮ ಕುರಿತ ಪ್ರಜಾವಾಣಿ ವರದಿ ಉಲ್ಲೇಖಿಸಿ ಸುಮಲತಾ ಟ್ವೀಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಆರ್‌ಎಸ್‌ ಅಣೆಕಟ್ಟೆ ಸಮೀಪದಲ್ಲಿರುವ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಆಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಪ್ರಜಾವಾಣಿಯಲ್ಲಿ ಪ್ರಕಟವಾಗಿರುವ ವರದಿಯನ್ನು ಉಲ್ಲೇಖಿಸಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಟ್ವೀಟ್‌ ಮಾಡಿದ್ದಾರೆ.

ಕೆಲವೇ ಜನರ ದುರಾಸೆಗೆ, ಸ್ವಾರ್ಥಕ್ಕೆ ನಮ್ಮ ಜನರ ಹಾಗೂ ಮಕ್ಕಳ ಭವಿಷ್ಯ ಬಲಿಯಾಗಲು ಬಿಡಬಾರದು ಎಂದು ಮನವಿ ಮಾಡಿದ್ದಾರೆ.

 

ಮತ್ತೊಂದು ಟ್ವೀಟ್‌ನಲ್ಲಿ, ಬೇರೆಯವರಿಗೆ ಗಂಧವನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಗಂಧವಾಗುತ್ತದೆ. ಬೇರೆಯವರಿಗೆ ಕೆಸರನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆʼ ಎನ್ನುವ ಮೂಲಕ ವಿರೋಧಿಗಳತ್ತ ಚಾಟಿ ಬೀಸಿದ್ದಾರೆ.

 

 

ಗಣಿಗಾರಿಕೆ ವಿಚಾರವಾಗಿ ಸಂಸದೆ ಸುಮಲತಾ ಹಾಗೂ ಜೆಡಿಎಸ್‌ ನಾಯಕರ ನಡುವೆ ಕಳೆದ ಕೆಲವು ದಿನಗಳಿಂದ ವಾಕ್ಸಮರ ನಡೆಯುತ್ತಿದೆ.

ಇನ್ನಷ್ಟು ಸುದ್ದಿಗಳು
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು