ಮಂಗಳೂರು ಸ್ಫೋಟಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ: ಡಿಜಿಪಿ

ಮಂಗಳೂರು: ನಗರದ ಗರೋಡಿಯಲ್ಲಿ ಆಟೊರಿಕ್ಷಾದಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಪೋಟ ಪ್ರಕರಣಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಭಾನುವಾರ ಟ್ವೀಟ್ ಮಾಡಿರುವ ಅವರು, ‘ಪ್ರೇಮರಾಜ್ ದಾಖಲೆಗಳು ಕಳವಾಗಿದ್ದವು. ಅವರಿಗೂ ಈ ಸ್ಫೋಟ ಪ್ರಕರಣಕ್ಕೂ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಕೃತ್ಯದ ಸ್ಥಳದಲ್ಲಿ ಪ್ರೇಮರಾಜ್ ಹುಟಗಿ ಅವರ ಆಧಾರ್ ಕಾರ್ಡ್ ಪತ್ತೆಯಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಬಿತ್ತಿರಿಸಿದ್ದವು.
ಸ್ಫೋಟ ಸಂಭವಿಸುವಾಗ ರಿಕ್ಷಾದಲ್ಲಿದ್ದ ಪ್ರಯಾಣಿಕನ ಹೆಸರನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.