ಮಂಗಳೂರು ಸ್ಫೋಟ: ಸಂತ್ರಸ್ತ ರಿಕ್ಷಾ ಚಾಲಕನಿಗೆ ಗೃಹ ಸಚಿವರಿಂದ ₹50,000 ನೆರವು

ಮಂಗಳೂರು: ನಗರದ ಗರೋಡಿಯಲ್ಲಿ ನ. 19ರಂದು ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಬುಧವಾರ ಭೇಟಿಯಾದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ವೈಯಕ್ತಿಕವಾಗಿ 50 ಸಾವಿರ ರೂಪಾಯಿ ಆರ್ಥಿಕ ನೆರವನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಿದರು.
ಇದಕ್ಕೂ ಮೊದಲು ನಗರದ ಗರೋಡಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಮಂಗಳೂರು ಸ್ಫೋಟ: ಸಂತ್ರಸ್ತ ರಿಕ್ಷಾ ಚಾಲಕನಿಗೆ ಗೃಹ ಸಚಿವರಿಂದ ₹50,000 ನೆರವು #mangalurublast #aragajnanedra pic.twitter.com/mtzMt0Bp1g
— Prajavani (@prajavani) November 23, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.