ಮಂಗಳೂರು: ನಗರದ ಗರೋಡಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸಾಗಿಸುತ್ತಿದ್ದಾಗ ನಡೆದ ಸ್ಫೋಟಕ್ಕೆ ಸಿದ್ಧಪಡಿಸಿದ ಕುಕ್ಕರ್ ಜೊತೆಗೆ ಆರೋಪಿ ಶಾರಿಖ್ ಇರುವ ಚಿತ್ರವನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಚಿತ್ರ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಮೈಸೂರಿನಲ್ಲಿ ಆತನ ಮನೆಯಲ್ಲಿ ವಶಪಡಿಸಿಕೊಂಡಿರುವ ವಸ್ತುಗಳನ್ನು ಪೊಲೀಸರು ಮಂಗಳೂರಲ್ಲಿ ಪ್ರದರ್ಶಿಸಿದರು. ಆ ವೇಳೆ ಶಾರಿಖ್ ಕುಕ್ಕುರ್ ಜೊತೆಗಿದ್ದ ಚಿತ್ರವೂ ಕಂಡುಬಂದಿತು.
ಸ್ಪೋಟದಲ್ಲಿ ಗಾಯಗೊಂಡು ನಗರದ ಫಾದರ್ ಮಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಶಾರೀಕ್ ಎಂಬುದನ್ನು ಆತನ ಕುಟುಂಬದವರು ಖಚಿತ ಪಡಿಸಿದ್ದಾರೆ ಎಂದು ಹೇಳಿ ಅಲೋಕ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದ್ದರು.
ನಗರದಲ್ಲಿ ಬಾಂಬ್ ಸ್ಪೋಟ ನಡೆಸುವ ಉದ್ದೇಶದಿಂದ ಕುಕ್ಕರ್ ಬಾಂಬ್ ಸಾಗಿಸಿದ್ದ. ಮೈಸೂರಿನಲ್ಲಿ ಬಾಂಬ್ ತಯಾರಿಸಿ ತಂದಿದ್ದ. ನ.10ರಂದು ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೈಸೂರಿಗೆ ಮರಳಿದ್ದ ಎಂದು ಅವರು ಹೇಳಿದ್ದರು.