ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ಸ್ಫೋಟ: ಘಟನಾ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

Last Updated 23 ನವೆಂಬರ್ 2022, 6:00 IST
ಅಕ್ಷರ ಗಾತ್ರ

ಮಂಗಳೂರು: ನಗರದ ಗರೋಡಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಸ್ಫೋಟದ ಬಗ್ಗೆ ಹಾಗೂ ನಂತರದ ತನಿಖೆಯ ಬೆಳವಣಿಗೆಗಳ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರೇಟ್ ನ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸ್ಫೋಟದಿಂದ ಗಾಯಗೊಂಡಿರುವ ಆರೋಪಿ ಮಹಮ್ಮದ್ ಶಾರಿಕ್ ಹಾಗೂ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಕೂಡ ಗೃಹ ಸಚಿವರು ಭೇಟಿಯಾದರು.

ಈ ಭಯೋತ್ಪಾದನಾ ಕೃತ್ಯದ ಬಗ್ಗೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಗೃಹ ಸಚಿವರು ಸಭೆ ನಡೆಸಲಿದ್ದಾರೆ.

ಡಿಜಿಪಿ ಮತ್ತು ಐಜಿಪಿ ಪ್ರವೀಣ್ ಸೂದ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್. ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ, ಡಿಸಿಪಿ ಅಂಶು ಕುಮಾರ್ ಜೊತೆಯಲ್ಲಿದ್ದರು.

ಆರಗ ಜ್ಞಾನೇಂದ್ರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಸ್ಥಳೀಯ ವಿಶ್ವ ಹಿಂದೂ ಪರಿಷತ್ ಮುಖಂಡರಾದ ಜಗದೀಶ್ ಶೇಣವ ಹಾಗೂ ಇತರರು ಕೇಸರಿ ಶಾಲನ್ನು ತೋಡಿಸಿ ಗೃಹ ಸಚಿವರನ್ನು ಬರಮಾಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT