ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾ.21ಕ್ಕೆ ಎಚ್‌.ಎಂ. ರೇವಣ್ಣ ಅಭಿನಂದನೆ

Last Updated 18 ಮಾರ್ಚ್ 2021, 18:49 IST
ಅಕ್ಷರ ಗಾತ್ರ

ಬೆಂಗಳೂರು: ಎಚ್‌.ಎಂ. ರೇವಣ್ಣ ಸಾಂಸ್ಕೃತಿಕ ಪ್ರತಿಷ್ಠಾನದ ನೇತೃತ್ವದಲ್ಲಿ ಮಾರ್ಚ್‌ 21ರಂದು ನಗರದ ಮೈಸೂರು ರಸ್ತೆಯ ಪೂರ್ಣಿಮಾ ಕನ್ವೆನ್ಷನ್ ಸೆಂಟರ್‌ನಲ್ಲಿ ಮಾಜಿ ಸಚಿವ ಎಚ್‌.ಎಂ. ರೇವಣ್ಣ ಅವರ ಅಭಿನಂದನಾ ಸಮಾರಂಭ ನಡೆಯಲಿದೆ.

ಈ ಕುರಿತು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಕಮ್ಯುನಿಟಿ ಸೆಂಟರ್‌ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಎಂ. ನಾಗರಾಜ್‌, ‘ಸಮಾರಂಭದಲ್ಲಿ ರೇವಣ್ಣ ಅವರ ಜೀವನ ಮತ್ತು ಸಾಧನೆಗೆ ಸಂಬಂಧಿಸಿದ ‘ಸಂಗತ’ ಅಭಿನಂದನಾ ಕೃತಿ, ‘ದೃಶ್ಯಯಾನ’ ಫೋಟೊ ಸಂಗ್ರಹ ಮತ್ತು ‘ಇಟ್ಟ ಹೆಜ್ಜೆ ದಿಟ್ಟ ನಿಲುವು’ ಎಂಬ ಕಿರುಚಿತ್ರಗಳನ್ನು ಬಿಡುಗಡೆ ಮಾಡಲಾಗುವುದು’ ಎಂದರು.

ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪ ಮೊಯಿಲಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉದ್ಘಾಟಿಸುವರು. ಕೇಂದ್ರದ ಮಾಜಿ ಸಚಿವ ಎಸ್‌.ಎಂ. ಕೃಷ್ಣ ‘ಸಂಗತ’ ಕೃತಿಯನ್ನು ಮತ್ತು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ‘ದೃಶ್ಯಯಾನ’ವನ್ನು ಬಿಡುಗಡೆ ಮಾಡುವರು. ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಿರುಚಿತ್ರ ಬಿಡುಗಡೆ ಮಾಡುತ್ತಾರೆ ಎಂದು ತಿಳಿಸಿದರು.

‘ಸಂಗತ’ ಕೃತಿಯ ಸಂಪಾದಕರಾದ ಹಿರಿಯ ಪತ್ರಕರ್ತ ಲಕ್ಷ್ಮಣ ಕೊಡಸೆ, ನಿವೃತ್ತ ಅಧಿಕಾರಿ ಕಾ.ತ. ಚಿಕ್ಕಣ್ಣ, ಪ್ರತಿಷ್ಠಾನದ ಸದಸ್ಯ ಡಾ.ಬಿ.ಕೆ. ರವಿ, ಕಾರ್ಯದರ್ಶಿ ಟಿ. ಮಂಜಪ್ಪ ಮಾಗೊದಿ ಪ‍ತ್ರಿಕಾಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT