ಸೋಮವಾರ, ಮೇ 16, 2022
24 °C

ಪತ್ರ ಎಸೆದದ್ದಕ್ಕೆ ವಿಷಾದ ವ್ಯಕ್ತಪಡಿಸಿದ ಮರಿತಿಬ್ಬೇಗೌಡ; ಮತ್ತೆ ಸದನದ ಕಲಾಪ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಉತ್ತರದಿಂದ ಸಿಟ್ಟಿಗೆದ್ದು ಸಭಾಧ್ಯಕ್ಷರತ್ತ ಪತ್ರ ಎಸೆದಿದ್ದ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ವಿಷಾದ ವ್ಯಕ್ತಪಡಿಸಿದ್ದಾರೆ. ಇದೀಗ ಸದನದಲ್ಲಿ ಕಲಾಪ ಮತ್ತೆ ಆರಂಭಗೊಂಡಿದೆ.

ಸಚಿವರ ಮಾತಿನಿಂದ ಮನನೊಂದು ಪತ್ರ ಎಸೆದಿರುವುದಾಗಿ ಮರಿತಿಬ್ಬೇಗೌಡ ಸದನಕ್ಕೆ ತಿಳಿಸಿದ್ದು, ಘಟನೆ ಕುರಿತು ವಿಷಾದವನ್ನೂ ವ್ಯಕ್ತಪಡಿಸಿದರು. ತಾವು ದುರುದ್ದೇಶದಿಂದ ಮಾತನಾಡಿಲ್ಲ ಎಂದು ಗೃಹ ಸಚಿವ ಬೊಮ್ಮಾಯಿ ಅವರೂ ಸ್ಪಷ್ಟಪಡಿಸಿದ್ದಾರೆ.

ಬಳಿಕ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಪ್ರಶ್ನೋತ್ತರ ಕಲಾಪ ಮುಂದುವರಿಸಿದರು.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು