ಸೋಮವಾರ, ಮೇ 17, 2021
30 °C

ಮಸ್ಕಿ ಫಲಿತಾಂಶ: ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ಬಿಜೆಪಿಯ ಪ್ರತಾಪ್ ಗೌಡ ಪಾಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಮಸ್ಕಿ ವಿಧಾನಸಭಾ ಉಪಚುನಾವಣೆ ಮತದಾನ ಎಣಿಕೆ ಪ್ರಕ್ರಿಯೆ ಭರದಿಂದ ಸಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಾರಿ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಸೋಲುವುದು ನಿಶ್ಚಿತ ‌ಎನ್ನುವುದನ್ನು ಅರಿತು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರು ಮತ ಎಣಿಕೆ ಕೇಂದ್ರದಿಂದ ಹೊರ ನಡೆದರು.

'ಕ್ಷೇತ್ರದಲ್ಲಿ ವಿರೋಧಿ ಅಲೆ ಎದ್ದಿರುವುದು ಗೊತ್ತಾಗುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಮಾಡಿದಾಗ್ಯೂ ಜನರು ಬೆಲೆ ಕೊಟ್ಟಿಲ್ಲ. ನಿರೀಕ್ಷಿತ ಮತಗಟ್ಟೆಯಲ್ಲೂ ಬಿಜೆಪಿಗೆ ಮತಗಳು ಬಂದಿಲ್ಲ' ಎಂದು ಪ್ರತಾಪಗೌಡ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸೋಲಿಗೆ ಏನು ಕಾರಣ ಎಂಬುದು ಆನಂತರ ಪಕ್ಷದ ಹಿರಿಯರು ಕುರಿತು ಚರ್ಚಿಸಲಿದ್ದಾರೆ. ಪಕ್ಷದ ‌ತೀರ್ಮಾನಕ್ಕೆ  ಬದ್ಧವಾಗಿದ್ದೇನೆ' ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು