ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಗಳ ಹತ್ಯೆ: ತನಿಖೆ ಬಗ್ಗೆ ಹೈಕೋರ್ಟ್ ಅತೃಪ್ತಿ

Last Updated 18 ಆಗಸ್ಟ್ 2021, 4:00 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಗಳ ಹತ್ಯೆ ಪ್ರಕರಣದ ತನಿಖೆ ಸಂಬಂಧ ಹಾಸನ ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ(ಡಿಸಿಎಫ್‌) ಅನುಸರಿಸಿರುವ ಪ್ರಕ್ರಿಯೆ ಬಗ್ಗೆ ಪ್ರಮಾಣ ಪತ್ರ ಸಲ್ಲಿಸುವಂತೆ ಅರಣ್ಯ ಇಲಾಖೆ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಬೇಲೂರು ತಾಲ್ಲೂಕಿನಲ್ಲಿ ಮಂಗಗಳ ಸಾಮೂಹಿಕ ಹತ್ಯೆ ಬಗ್ಗೆ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದ ಡಿಸಿಎಫ್‌ಗೆ ಹಲವು ಪ್ರಶ್ನೆಗಳನ್ನು ಕೇಳಿದ ಪೀಠ, ಈ ಪ್ರಕರಣ ನಿರ್ವಹಿಸಿದ ರೀತಿಗೆ ಅತೃಪ್ತಿ ವ್ಯಕ್ತಪಡಿಸಿತು. ‘ಕ್ರಿಮಿನಲ್‌ ಕ್ರಮವನ್ನು ಹೇಗೆ ಅನುಸರಿಸಬೇಕು ಎಂಬುದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿದಂತೆ ಕಾಣಿಸುತ್ತಿಲ್ಲ. ಹೀಗಾಗಿ, ಡಿಸಿಎಫ್‌ ಅನುಸರಿಸಿರುವ ಪ್ರಕ್ರಿಯೆಗಳ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಲು ಅರಣ್ಯ ಇಲಾಖೆ ಕಾರ್ಯದರ್ಶಿಗೆ ನಿರ್ದೇಶನ ನೀಡಲಾಗುತ್ತಿದೆ’ ಎಂದು ಪೀಠ ಹೇಳಿತು.

‘2021ರ ಜುಲೈ 30ರಲ್ಲಿ 38 ಮಂಗಗಳ ಮೃತದೇಹ ದೊರೆತ ಪ್ರಕರಣವನ್ನು ನ್ಯಾಯಾಲಯವೇ ಗಂಭೀರವಾಗಿ ಪರಿಗಣಿಸಿದೆ. ಆದರೆ, ದುರಾದೃಷ್ಟವಶಾತ್ ಅರಣ್ಯ ಇಲಾಖೆ ಅಧಿಕಾರಿಗಳು ಆಕಸ್ಮಿಕ ಘಟನೆ ಎಂಬಂತೆ ಅತ್ಯಂತ ಹಗುರವಾಗಿ ಪರಿಗಣಿಸಿದ್ದಾರೆ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು. ಆ. 25ರೊಳಗೆ ಪ್ರಮಾಣ ಪತ್ರ ಸಲ್ಲಿಸುವಂತೆ ತಿಳಿಸಿ, ವಿಚಾರಣೆಯನ್ನು ಆ.26ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT