ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ದೇವಸ್ಥಾನಗಳಲ್ಲಿ ಮಾಸ್ಟರ್‌ಪ್ಲಾನ್ ಶೀಘ್ರ ಜಾರಿ: ಶಶಿಕಲಾ ಜೊಲ್ಲೆ

Last Updated 2 ಫೆಬ್ರುವರಿ 2023, 19:34 IST
ಅಕ್ಷರ ಗಾತ್ರ

ಬೆಳಗಾವಿ: ‘ಮುಜರಾಯಿ ಇಲಾಖೆಗೆ ಸೇರಿದ ರಾಜ್ಯದ 25 ಎ–ಗ್ರೇಡ್‌ ದೇವಸ್ಥಾನಗಳಲ್ಲಿ ‘ಮಾಸ್ಟರ್‌ ಪ್ಲಾನ್‌’ ಜಾರಿಗೆ ಸಿದ್ಧತೆ ನಡೆಸಲಾಗಿದೆ. ಬಜೆಟ್‌ ಅಧಿವೇಶನ ಮುಗಿದ ತಕ್ಷಣ ಇದನ್ನು ಕಾರ್ಯಗತ ಮಾಡಲಾಗುವುದು’ ಎಂದು ಮುಜರಾಯಿ,
ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

‘ಬೆಂಗಳೂರು ನಗರವೂ ಸೇರಿದಂತೆ ರಾಜ್ಯದ ಹಲವೆಡೆ ದೇವಸ್ಥಾನಗಳ ಜಾಗ ಅತಿಕ್ರಮಣವಾಗಿದೆ. ಮುಜರಾಯಿ ಹಾಗೂ ವಕ್ಫ್‌ ಭೂಮಿ ಅತಿಕ್ರಮಣವನ್ನು ‘ಮಾಸ್ಟರ್‌ ಪ್ಲಾನ್‌’ ಮೂಲಕ ತೆರವು ಮಾಡಲಾಗುವುದು’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಸವದತ್ತಿ ತಾಲ್ಲೂಕಿನ ಯಲ್ಲಮ್ಮನ ಗುಡ್ಡ ದೇವಸ್ಥಾನ ಅಭಿವೃದ್ಧಿಗೆ ಸ್ವತಃ ಮುಖ್ಯಮಂತ್ರಿ ಆಸ್ಥೆ ವಹಿಸಿದ್ದಾರೆ. ಈಗಾಗಲೇ ಒತ್ತುವರಿ ತೆರವು ಮುಂದುವರಿದಿದೆ. ಮಾಸ್ಟರ್‌ ಪ್ಲಾನ್‌ನಲ್ಲಿ ಈ ದೇವಸ್ಥಾನದ ಅಭಿವೃದ್ಧಿ ಕೂಡ ಸೇರಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಕಾಶಿಯಾತ್ರೆ’ ಯೋಜನೆ ಫೆ.15ರಿಂದ: ‘ವಿಪರೀತ ಚಳಿ ಇದ್ದ ಕಾರಣ ‘ಕಾಶಿಯಾತ್ರೆ’ ಯೋಜನೆಯನ್ನು ಎರಡು ತಿಂಗಳಿಂದ ಸ್ಥಗಿತ ಮಾಡಲಾಗಿತ್ತು. ಫೆ.15ರಿಂದ ಮತ್ತೆ ಆರಂಭಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT