ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರು ಮಂದಿಗೆ ‘ಮಾಸ್ತಿ ಪ್ರಶಸ್ತಿ’

Last Updated 15 ಫೆಬ್ರುವರಿ 2021, 7:43 IST
ಅಕ್ಷರ ಗಾತ್ರ

ಬೆಂಗಳೂರು: ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್‌ ವತಿಯಿಂದ ನೀಡಲಾಗುವ ಈ ಸಾಲಿನ ‘ಮಾಸ್ತಿ ಪ್ರಶಸ್ತಿ’ ಪ್ರಕಟಗೊಂಡಿದ್ದು, ಆರು ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪುರಸ್ಕೃತರು: ಲೇಖಕರಾದ ಸಂಧ್ಯಾ ಎಸ್‌.ಪೈ (ಶಿಶು ಸಾಹಿತ್ಯ), ಎಸ್‌.ಆರ್.ವಿಜಯಶಂಕರ (ವಿಮರ್ಶೆ), ಪುರುಷೋತ್ತಮ ಬಿಳಿಮಲೆ (ಸಂಶೋಧನೆ), ಸುಬ್ರಾಯ ಚೊಕ್ಕಾಡಿ (ಕಾವ್ಯ), ಕೇಶವರೆಡ್ಡಿ ಹಂದ್ರಾಳ (ಕಥೆ) ಹಾಗೂ ಸ.ರಘುನಾಥ (ಸೃಜನಶೀಲ).

‘ಪ್ರಶಸ್ತಿಗಳು ತಲಾ ₹25 ಸಾವಿರ ನಗದು, ಮಾಸ್ತಿ ಪ್ರಶಸ್ತಿ ಫಲಕ ಹಾಗೂ ಸನ್ಮಾನ ಒಳಗೊಂಡಿವೆ. ಮಾರ್ಚ್‌ 27ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ’ ಎಂದು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್‌ನ ಅಧ್ಯಕ್ಷ ಮಾವಿನಕೆರೆ ರಂಗನಾಥನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT