ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಠಾಧೀಶರ ಒಕ್ಕೂಟ ಸಭೆ ಇಂದು

Last Updated 12 ಫೆಬ್ರುವರಿ 2021, 20:00 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರ ಹೊರಡಿಸಿರುವ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ವೀರಶೈವ–ಲಿಂಗಾಯತ ಸಮಾಜದ ಎಲ್ಲ ಪಂಗಡಗಳನ್ನು ಸೇರಿಸಬೇಕು ಎಂದು ಒತ್ತಾಯಿಸಲು ರಾಷ್ಟ್ರೀಯ ವೀರಶೈವ ಲಿಂಗಾಯತ ಮಠಾಧೀಶ ಒಕ್ಕೂಟ ಶನಿವಾರ ನಗರದಲ್ಲಿ ಸಭೆ ಕರೆದಿದೆ.

ಶಿವಯೋಗ ಮಂದಿರದ ಸ್ವಾಮೀಜಿ, ಶ್ರೀಶೈಲಪೀಠದ ಸ್ವಾಮೀಜಿ, ಸಿದ್ದಗಂಗಾ ಮಠದ ಸ್ವಾಮೀಜಿ, ಉಜ್ಜಯಿನಿ ಪೀಠದ ಸ್ವಾಮೀಜಿ ನೇತೃತ್ವ ವಹಿಸಲಿದ್ದು, 500ಕ್ಕೂ ಹೆಚ್ಚು ಮಠಾ ಧೀಶರು ಭಾಗವಹಿಸಲಿದ್ದಾರೆ. ವಿಜಯನಗರದ ಬಸವೇಶ್ವರ ಸುಜ್ಞಾನ ಮಂದಿರದಲ್ಲಿ ಸಭೆ ನಡೆಯಲಿದ್ದು, ಮುಖ್ಯಮಂತ್ರಿಯವರ ಆಪ್ತರೂ ಆದ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಸ್‌.ಪರಮಶಿವಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT