ಸೋಮವಾರ, ಸೆಪ್ಟೆಂಬರ್ 20, 2021
21 °C

ಯೋಗಿ ಆದಿತ್ಯನಾಥರಂತೆ ಮಠಾಧೀಶರೊಬ್ಬರನ್ನು ಸಿಎಂ ಮಾಡಿ: ಮುಷ್ಟೂರು ಮಠದ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಬೆಂಗಳೂರು: ‘ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. ಅದೇ ರೀತಿ, ಕರ್ನಾಟಕದಲ್ಲಿಯೂ ಮಠಾಧೀಶರೊಬ್ಬರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಬಹುದು. ಬಿಜೆಪಿ ವರಿಷ್ಠರು ಈ ನಿಟ್ಟಿನಲ್ಲಿ ಯೋಚಿಸಬೇಕು’ ಎಂದು ಮುಷ್ಟೂರು ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಾರೆ ಎಂಬ ಸುದ್ದಿಗೆ ಸಂಬಂಧಿಸಿದಂತೆ ತಮ್ಮ ನಿಲುವು ವ್ಯಕ್ತಪಡಿಸಲು ಸೇರಿದ್ದ ಸ್ವಾಮೀಜಿಗಳ ಸಭೆಯಲ್ಲಿ ಮಾತನಾಡಿದರು. ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಸಭೆಯ ನೇತೃತ್ವ ವಹಿಸಿದ್ದಾರೆ.

ವೀರಶೈವ ಲಿಂಗಾಯತರಿಗೆ ನೀಡಿ: ‘ಯಡಿಯೂರಪ್ಪನವರನ್ನು ಬದಲಿಸುವುದು ಖಚಿತ ಎಂದಾದರೆ, ವೀರಶೈವ ಲಿಂಗಾಯತ ಸಮುದಾಯದ ನಾಯಕರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಬೇಕು. ಈ ಸಮುದಾಯದ ನಾಯಕರ ಪೈಕಿ, ಬಸವರಾಜ ಬೊಮ್ಮಾಯಿ, ಮುರುಗೇಶ ನಿರಾಣಿ, ವಿ.ಸೋಮಣ್ಣ, ಮಾಧುಸ್ವಾಮಿ ಮುಖ್ಯಮಂತ್ರಿ ಹುದ್ದೆ ನಿಭಾಯಿಸಲು ಸಮರ್ಥರಿದ್ದಾರೆ’ ಎಂದು ಧಾರವಾಡದ ಮುರಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. 

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಿಂದ 50ಕ್ಕೂ ಹೆಚ್ಚು ಸ್ವಾಮೀಜಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು