2021ನೇ ಸಾಲಿನಲ್ಲಿ ಹುಬ್ಬಳ್ಳಿಯ ಕಾವ್ಯಾ ಕಡಮೆ ಅವರ ‘ಮಾಕೋನ ಏಕಾಂತ’ ಕಥೆಗಳು, ಬೆಂಗಳೂರಿನ ಪೂರ್ಣಿಮಾ ಮಾಳಗಿಮನಿ ಅವರ ‘ಇಜಯಾ’ ಕಾದಂಬರಿ, ಮೈಸೂರಿನ ಡಾ. ಸುಜಾತಾ ಅಕ್ಕಿ ಅವರ ’ಆಕಾಶದ ಕೀಲಿ’ ನಾಟಕಕ್ಕೆ ಬಹುಮಾನ ಲಭಿಸಿದೆ. ಮಾ. 4 ಹಾಗೂ 5 ರಂದು ನಡೆಯುವ ಮಹಿಳಾ ಲೇಖಕಿಯರ ಸಮಾವೇಶದಲ್ಲಿ ಬಹುಮಾನ ನೀಡಲಾಗುವುದು. ಪ್ರತಿ ಕೃತಿಗೆ ₹10ಸಾವಿರ ನಗದು ಬಹುಮಾನ, ಪ್ರಮಾಣಪತ್ರ ನೀಡಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ತಿಳಿಸಿದ್ದಾರೆ.