ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ವಪಕ್ಷ ಸಭೆ ಕರೆಯಲು ಎಂ.ಬಿ.ಪಾಟೀಲ್‌ ಒತ್ತಾಯ

ಕೃಷ್ಣಾ ನದಿ ನೀರು ಹೊಸದಾಗಿ ಹಂಚಿಕೆಗೆ ಕೇಂದ್ರಕ್ಕೆ ತೆಲಂಗಾಣ ಒತ್ತಡ
Last Updated 8 ಅಕ್ಟೋಬರ್ 2020, 15:52 IST
ಅಕ್ಷರ ಗಾತ್ರ

ವಿಜಯಪುರ: ಕೃಷ್ಣಾ ನದಿ ನೀರಿನ್ನು ಹೊಸದಾಗಿ ಹಂಚಿಕೆ ಮಾಡುವಂತೆ ನ್ಯಾಯಮಂಡಳಿಗೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಿರುವ ತೆಲಂಗಾಣದ ಮನವಿಯು ರಾಜ್ಯದ ಹಿತಾಸಕ್ತಿಗೆ ಮಾರಕವಾಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಮುಖ್ಯಮಂತ್ರಿಗಳು ಈ ಕೂಡಲೇ ಸರ್ವಪಕ್ಷ ಸಭೆ ಕರೆದು,ರಾಜ್ಯದ ನೀರಿನ ಹಿತಾಸಕ್ತಿ ಕಾಪಾಡಲು ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಎಂ.ಬಿ.ಪಾಟೀಲ ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ, ಜಲ ಸಂಪನ್ಮೂಲ ಸಚಿವರು ಹಾಗೂ ರಾಜ್ಯದ ಕೇಂದ್ರ ಸಚಿವರಿಗೆ ಪತ್ರ ಬರೆದಿರುವ ಅವರು,ಕರ್ನಾಟಕದ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಕೂಡಲೇ ಸ್ಪಷ್ಟನೆ ನೀಡಬೇಕು ಎಂದಿದ್ದಾರೆ.

ಕೃಷ್ಣಾ ನ್ಯಾಯಮಂಡಳಿಗೆ ತೀರ್ಪಿನ ಪ್ರಕಾರ ನೀರಿನ ಮರು ಹಂಚಿಕೆ ಆ ಎರಡು ರಾಜ್ಯಗಳಿಗೆ ಸೀಮಿತವಾಗಿದ್ದೇ ಹೊರತು, ಕರ್ನಾಟಕಕ್ಕೆ ಅಲ್ಲ. ಆದರೆ, ಈ ಹಂತದಲ್ಲಿ ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್‍ ಹಾಗೂ ಆಂಧ್ರ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳ ಸಭೆ ಕರ್ನಾಟಕ ಹಿತಾಸಕ್ತಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT