ಬೆಂಗಳೂರು: ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ ಉಲ್ಲಂಘನೆ ಆರೋಪದಡಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತುಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಒಟ್ಟು 29 ಜನರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.

ಆರೋಪಿಗಳುಇದೇ 24 ರಂದು ಖುದ್ದಾಗಿ ಅಥವಾ ಪರವಾದ ವಕೀಲರ ಮುಖಾಂತರ ನ್ಯಾಯಾಲಯಕ್ಕೆ ಹಾಜ ರಾಗಿ ಸಮಜಾಯಿಷಿ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.

‘ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾದ ಪಾದಯಾತ್ರೆಯ ವೇಳೆ ಕೋವಿಡ್–19ರ ನಿಯಮಗಳನ್ನು ಉಲ್ಲಂಘಿಸಲಾಗಿದೆ’ ಎಂದು ಆರೋಪಿಸಿ ರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೈಕೋರ್ಟ್ ಆದೇಶದಂತೆ 2022ರ ಜ. 13ಕ್ಕೆ ರಾಮನಗರದಲ್ಲಿ ಪಾದಯಾತ್ರೆ ಸ್ಥಗಿತಗೊಳಿಸಲಾಗಿತ್ತು. ಫೆ. 27ಕ್ಕೆ ರಾಮನಗರದಿಂದ ಪಾದಯಾತ್ರೆ ಯನ್ನು ಪುನಃ ಆರಂಭಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.