ಗುರುವಾರ , ಜುಲೈ 7, 2022
23 °C

ಬೆಳಗಾವಿ ಅಧಿವೇಶನ: ವಿಧಾನಸಭೆ ಆವರಣ ಪ್ರವೇಶಿಸದಂತೆ ಸುದ್ದಿ ವಾಹಿನಿಗಳಿಗೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ (ಸುವರ್ಣ ವಿಧಾನಸೌಧ): ಸುದ್ದಿ ವಾಹಿನಿಗಳ ಕ್ಯಾಮೆರಾಗಳನ್ನು ವಿಧಾನಸಭೆಯ ಆವರಣಕ್ಕೆ ತರದಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬುಧವಾರ ನಿರ್ಬಂಧ ವಿಧಿಸಿದ್ದಾರೆ.

ವಿಧಾನಸಭೆಯ ಸಭಾಂಗಣಕ್ಕೆ ಪ್ರವೇಶ ನಿರ್ಬಂಧಿಸಿ ಈ ಹಿಂದೆಯೇ ಆದೇಶ ಹೊರಡಿಸಲಾಗಿತ್ತು. ಹೊರಗಡೆ ಕ್ಯಾಮೆರಾಗಳನ್ನು ಬಳಸಲು ಅವಕಾಶವಿತ್ತು.

ಆದರೆ, ಕ್ಯಾಮೆರಾಗಳನ್ನು ವಿಧಾನಸಭೆಯ ಹೊರಾಂಗಣಕ್ಕೂ ತರದಂತೆ ಬುಧವಾರದಿಂದ ನಿರ್ಬಂಧ ವಿಧಿಸಲಾಗಿದೆ. ಇದನ್ನು ಪ್ರತಿಭಟಿಸಿ ದೃಶ್ಯ ಮಾಧ್ಯಮಗಳ ಪ್ರತಿನಿಧಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಹಿಂದಿನಂತಯೇ ಕ್ಯಾಮೆರಾಗಳಿಗೆ ಅವಕಾಶ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು