ಗುರುವಾರ , ಸೆಪ್ಟೆಂಬರ್ 16, 2021
24 °C

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳನ್ನು ನಿರ್ಬಂಧಿಸುವ ಸುತ್ತೋಲೆ ಹಿಂದಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮಾಧ್ಯಮ ಚಟುವಟಿಕೆಗಳ ಮೇಲೆ ನಿರ್ಬಂಧ ವಿಧಿಸಿ ಹೊರಡಿಸಿದ್ದ ಸುತ್ತೋಲೆಯನ್ನು ವಿಧಾನಸಭೆ ಸಚಿವಾಲಯ ಹಿಂದಕ್ಕೆ ಪಡೆದಿದೆ.

ವಿಧಾನಸೌಧದ ಕಾರಿಡಾರ್‌ಗಳಲ್ಲಿ ಪತ್ರಿಕಾ ಛಾಯಾಗ್ರಾಹಕರು ಛಾಯಾಗ್ರಹಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು ವಿಡಿಯೊ ಚಿತ್ರೀಕರಣ ನಡೆಸುವುದನ್ನು ನಿರ್ಬಂಧಿಸಿ ಸುತ್ತೋಲೆ ಹೊರಡಿಸಲಾಗಿತ್ತು. ಕಾರಿಡಾರ್‌ಗಳಲ್ಲಿ ವಿಡಿಯೊ ಚಿತ್ರೀಕರಣ ಮತ್ತು ಪತ್ರಿಕಾ ಛಾಯಾಗ್ರಹಣ ಮಾಡುತ್ತಿದ್ದು, ಇದರಿಂದ ಹಲವಾರು ಬಾರಿ ಗಣ್ಯ ವ್ಯಕ್ತಿಗಳ ಸುಗಮ ಚಲನವಲನಕ್ಕೆ ಅಡ್ಡಿ ಉಂಟಾಗುತ್ತಿದೆ ಎಂದು ಸುತ್ತೋಲೆಯಲ್ಲಿ ಸಮರ್ಥನೆ ನೀಡಲಾಗಿತ್ತು.

ಸುಗಮ ಚಲನೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಮುಖ್ಯಮಂತ್ರಿಯವರು ಮತ್ತು ಇತರ ಸಚಿವರಿಂದ ಹೇಳಿಕೆ ಪಡೆಯಲು ವಿಧಾನಸೌಧದ ಕೆಂಗಲ್ ದ್ವಾರದ ಬಳಿ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಸಚಿವಾಲಯದ ಈ ಕ್ರಮಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು