ಬುಧವಾರ, ಅಕ್ಟೋಬರ್ 21, 2020
25 °C

ಆರೋಗ್ಯ ಸಿಬ್ಬಂದಿ ಮುಷ್ಕರ ನಡೆಸಿದರೆ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆರೋಗ್ಯ ಸೇವೆಗಳಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡದೆ ಅಸಹಕಾರ ತೋರಿಸುವುದು, ಮುಷ್ಕರ ಮಾಡುವುದನ್ನು ವಿಪತ್ತು ನಿರ್ವಹಣಾ ಕಾಯ್ದೆಯ ಉಲ್ಲಂಘನೆ ಎಂದೇ ಪರಿಗಣಿಸಲಾಗುತ್ತದೆ. ಮುಷ್ಕರಗಳಲ್ಲಿ ತೊಡಗುವ ಸಿಬ್ಬಂದಿಗೆ ದಂಡ ವಿಧಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. 

ಈ ಕುರಿತು ಸೋಮವಾರ ಆದೇಶ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‌ ಭಾಸ್ಕರ್, ಆರೋಗ್ಯ ಸೇವೆಯಲ್ಲಿ ತೊಡಗಿಕೊಂಡಿರುವ ಸಿಬ್ಬಂದಿ ಮುಷ್ಕರಗಳನ್ನು ನಡೆಸುವುದು, ಅಸಹಕಾರ ವ್ಯಕ್ತಪಡಿಸುವುದು, ವರದಿಗಳನ್ನು ನೀಡದೇ ಇರುವುದು, ಅವಿಧೇಯತೆ ತೋರಿಸುವುದು, ಮೇಲಧಿಕಾರಿಗಳ ಆದೇಶ ಪಾಲನೆ ಮಾಡದೇ ಇರುವಂತಹ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ. 

ಸಾರ್ವಜನಿಕ ವಲಯದ ಅಧಿಕಾರಿಗಳು ಅಥವಾ ಸಿಬ್ಬಂದಿ, ಕಾಯಂ, ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೂ ಈ ಆದೇಶ ಅನ್ವಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು