ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ ರ‍್ಯಾಂಕಿಂಗ್‌ ಗೊಂದಲ: ಇಂದು ಸಭೆ

Last Updated 4 ಸೆಪ್ಟೆಂಬರ್ 2022, 22:29 IST
ಅಕ್ಷರ ಗಾತ್ರ

ಬೆಂಗಳೂರು:2020-21 ರಲ್ಲಿ ದ್ವಿತೀಯ ಪಿಯುಸಿ ತೇರ್ಗಡೆಯಾಗಿ ಪ್ರಸಕ್ತ ಸಾಲಿನಲ್ಲೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆದಿರುವ 24 ಸಾವಿರ ವಿದ್ಯಾರ್ಥಿಗಳ ಪಿಯುಸಿ ಅಂಕವನ್ನೂ ಪರಿಗಣಿಸುವಂತೆ ಹೈಕೋರ್ಟ್ ನೀಡಿರುವ ಆದೇಶ ಕುರಿತು ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.
ಅಶ್ವತ್ಥನಾರಾಯಣ ಅವರು ಸೋಮವಾರ ಮಹತ್ವದ ಸಭೆ ಕರೆದಿದ್ದಾರೆ.

‘ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ‌ ಮಹೇಶ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ
ಆಯುಕ್ತ ಪಿ. ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ಮತ್ತು ಕಾನೂನು ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮುಂದೆ ತೆಗೆದುಕೊಳ್ಳಬೇಕಾದ ಕ್ರಮ ಕುರಿತು ನಿರ್ಧರಿಸಲಾಗುವುದು’ ಎಂದು ಸಚಿವರು ತಿಳಿಸಿದ್ದಾರೆ.

ಕೋವಿಡ್‌ ಕಾರಣ 2020-21 ರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದೆ, ತೇರ್ಗಡೆ ಮಾಡಲಾಗಿತ್ತು. ನಂತರ ಸಿಇಟಿ ನಡೆಸಿ ವೃತ್ತಿಪರ ಶಿಕ್ಷಣ ಕೋರ್ಸುಗಳಿಗೆ ಪ್ರವೇಶ ನೀಡಲಾಗಿತ್ತು. ಹೀಗೆ ಪ್ರವೇಶ ಪಡೆದ 24 ಸಾವಿರ ವಿದ್ಯಾರ್ಥಿಗಳು ಈ ಬಾರಿಯೂ ಸಿಇಟಿ ಬರೆದಿದ್ದರು. ರ‍್ಯಾಂಕಿಂಗ್‌ ಪಟ್ಟಿಯಲ್ಲಿ ತಮ್ಮ ದ್ವಿತೀಯ ಪಿಯುಸಿ ಅಂಕ ಪರಿಗಣಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT