ವಿಜಯಪುರ: ರಾಜ್ಯದ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಡೆವೊಡ್ಡಲು ತಮಿಳುನಾಡು ಮುಂದಾಗಿರುವುದರಿಂದ ಮುಖ್ಯಮಂತ್ರಿ ಅವರು ತಕ್ಷಣ ಸರ್ವಪಕ್ಷ ಸಭೆ ಕರೆದು ಚರ್ಚಿಸಿ, ಅಡೆತಡೆಯಾಗದಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಆದ್ಯತೆ ನೀಡಬೇಕು ಎಂದು ಮಾಜಿ ಜಲಸಂಪನ್ಮೂಲ ಸಚಿವ, ಶಾಸಕ ಎಂ.ಬಿ.ಪಾಟೀಲ ಆಗ್ರಹಿಸಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕದಾಟು ಕಾನೂನು ಬದ್ಧವಾದ ಯೋಜನೆ, ಇದು ನಮ್ಮ ರಾಜ್ಯದ ಹಕ್ಕು. ಇದಕ್ಕೆ ತಮಿಳುನಾಡಿನ ಅನುಮತಿ ಅಗತ್ಯವಿಲ್ಲ ಎಂದು ಹೇಳಿದರು.
ತಮಿಳುನಾಡಿನ ಆಕ್ಷೇಪದ ಬಗ್ಗೆ ರಾಜ್ಯ ಸರ್ಕಾರತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ತಿಳಿಸಿದರು.
ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ತಮಿಳುನಾಡಿಗೆ ಹಂಚಿಕೆಯಾದ ನೀರಿನ ಪ್ರಮಾಣದಲ್ಲಿ ಯಾವುದೇ ಕಡಿತವಾಗುವುದಿಲ್ಲ. ಈ ಯೋಜನೆ ಅನುಷ್ಠಾನದಿಂದ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡಿಗೂ ಉಪಯೋಗವಾಗಲಿದೆ. ಹೆಚ್ಚುವರಿ ಮಳೆ, ಪ್ರವಾಹ ಉಂಟಾದ ವರ್ಷಗಳಲ್ಲಿ ಮೇಕೆದಾಟು ಅಣೆಕಟ್ಟೆಯಲ್ಲಿ ನೀರನ್ನು ಸಂಗ್ರಹಿಸಿ, ವಿದ್ಯುತ್ ಉತ್ಪಾದನೆಗೆ ಹಾಗೂ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಕ್ಕೆ ಕುಡಿಯಲು ಬಳಸಿಕೊಳ್ಳಲಾಗುತ್ತದೆ. ಈ ಯೋಜನೆಗೆ ತಮಿಳುನಾಡು ಅನಗತ್ಯ ಖ್ಯಾತೆ ತೆಗೆಯುವುದು ಸರಿಯಲ್ಲ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.